ಗ್ರಾಮೀಣ ಸರ್ಕಾರಿ ಕಾಲೇಜುಗಳಿಗೆ ಶೀಘ್ರವೇ ಇಂಟರ್ ನೆಟ್ ಸೌಲಭ್ಯ

ಆನ್‌ಲೈನ್ ಶಿಕ್ಷಣವು ರಾಜ್ಯದ ಎಲ್ಲ ವಿದ್ಯಾರ್ಥಿಗಳನ್ನು ತಲುಪದ ಕಾರಣ, ಈ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಉನ್ನತ ಶಿಕ್ಷಣ ಇಲಾಖೆ ಒಂದೇ ವೇದಿಕೆಯಲ್ಲಿ ಕಲಿಕೆ ನಿರ್ವಹಣಾ ವ್ಯವಸ್ಥೆಯಲ್ಲಿ  ಕಾರ್ಯನಿರ್ವಹಿಸುತ್ತಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಆನ್‌ಲೈನ್ ಶಿಕ್ಷಣವು ರಾಜ್ಯದ ಎಲ್ಲ ವಿದ್ಯಾರ್ಥಿಗಳನ್ನು ತಲುಪದ ಕಾರಣ, ಈ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಉನ್ನತ ಶಿಕ್ಷಣ ಇಲಾಖೆ ಒಂದೇ ವೇದಿಕೆಯಲ್ಲಿ ಕಲಿಕೆ ನಿರ್ವಹಣಾ ವ್ಯವಸ್ಥೆಯಲ್ಲಿ  ಕಾರ್ಯನಿರ್ವಹಿಸುತ್ತಿದೆ.

ರಾಜ್ಯದಲ್ಲಿರುವ 430 ಕಾಲೇಜುಗಳಲ್ಲಿ ಕೇವಲ 75 ಮಾತ್ರ ನಗರದಲ್ಲಿವೆ, ಉಳಿದ ಎಲ್ಲಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಗ್ರಾಮೀಣ ಪ್ರದೇಶದಲ್ಲಿವೆ.

ಹೊಸ ವ್ಯವಸ್ಥೆಯು ಪಿಪಿಟಿಗೆ ಹೆಚ್ಚುವರಿಯಾಗಿ, ಸಾಮಾನ್ಯ ತರಗತಿಗಳಿಗೆ ಅಧ್ಯಯನ ಸಾಮಾಗ್ರಿಗಳು ಮತ್ತು ವೀಡಿಯೊಗಳನ್ನು ಹೆಚ್ಚುವರಿಯಾಗಿ ನೀಡಲಿದೆ.  ವಿದ್ಯಾರ್ಥಿಗಳಿಗೆ ವಿವಿಧ ಪ್ರಶ್ನಾವಳಿಗಳ ಆಯ್ಕೆ ನೀಡಿ ನಿಯಮಿತವಾಗಿ ಅವರನ್ನು ಪರಿಶೀಲಿಸಲಾಗುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸೌಲಭ್ಯ ಪಡೆಯಲು ವಿದ್ಯಾರ್ಥಿಗಳಿಗೆ ಇಂಟರ್ ನೆಟ್ ಸೌಲಭ್ಯ ಪಡೆಯಲು ಸಾಧ್ಯವಾಗುವಂತೆ ಮಾಡಲು , ಶಿಕ್ಷಣ ಇಲಾಖೆ ಎಲ್ಲಾ ಸರ್ಕಾರಿ ಕಾಲೇಜುಗಳಿಗೆ ಇಂಟರ್ನೆಟ್ ಸೌಲಭ್ಯ ನೀಡಲು ಮುಂದಾಗಿದೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ಲಾಟ್‌ಫಾರ್ಮ್‌ನ ಸಂಪೂರ್ಣ ಕೋರ್ಸ್ ಅನ್ನು ಆಫ್‌ಲೈನ್‌ನಲ್ಲಿ ನಂತರದ ಬಳಕೆಗಾಗಿ ಡೌನ್‌ಲೋಡ್ ಮಾಡಬಹುದು ಎಂದು ಅವರು ಹೇಳಿದರು.

ವಿದ್ಯಾರ್ಥಿಗಳಿಗೆ ಸಹಾಯವಾಗಲು ಯುಟ್ಯೂಬ್‌ನಲ್ಲಿ ವಿಡಿಯೋ ಅಪ್‌ಲೋಡ್ ಮಾಡಲು ಮತ್ತು ವಾಟ್ಸಾಪ್ ಮತ್ತು ಟೆಲಿಗ್ರಾಮ್‌ನಂತಹ ಮೆಸೇಜಿಂಗ್ ಪ್ಲಾಟ್‌ಫಾರ್ಮ್‌ಗಳಲ್ಲಿ ಉಪನ್ಯಾಸ ಟಿಪ್ಪಣಿಗಳನ್ನು ಬದಲಿಸಲು ಅಧ್ಯಾಪಕ ಸಿಬ್ಬಂದಿ ಪ್ರಯತ್ನಿಸುತ್ತಿದ್ದಾರೆ. ಇದರಿಂದ ಸುಮಾರು 85 ರಷ್ಟು  ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಉನ್ನತ ಶಿಕ್ಷಣ
ಇಲಾಖೆ ನಿರ್ದೇಶಕ ಪ್ರದೀಪ್ ತಿಳಿಸಿದ್ದಾರೆ. ಎಲ್ಲಾ ಸರ್ಕಾರಿ ಶಾಲೆಗಳಿಗೆ ಇಂಟರ್ ನೆಟ್ ಅಳವಡಿಸುವ ನಿಟ್ಟಿನಲ್ಲಿ ಕೆಲಸ ಮಾಡಲು ಇಲಾಖೆ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com