ಕೋವಿಡ್ ವಾರ್ಡ್'ನಲ್ಲಿ ಪುಟ್ಟ ಗ್ರಂಥಾಲಯ: ಶಿವಮೊಗ್ಗ ಆಸ್ಪತ್ರೆಯಲ್ಲಿ ವಿಶಿಷ್ಟ ಪ್ರಯತ್ನ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕೋವಿಡ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತರಿಗೆ ಅನುಕೂಲವಾಗುವ ದೃಷ್ಟಿಯಿಂದ ಕೋವಿಡ್ ವಾರ್ಡ್ ನಲ್ಲಿ ಪುಟ್ರ ಗ್ರಂಥಾಲಯದ ವ್ಯವಸ್ಥೆಯನ್ನು ಮಾಡಲಾಗಿದ್ದು, ಈ ಗ್ರಂಥಾಲಯವನ್ನು ಉದ್ಘಾಟನೆ ಮಾಡಲಾಗಿದೆ. 
ಗ್ರಂಥಾಲಯ
ಗ್ರಂಥಾಲಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕೋವಿಡ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತರಿಗೆ ಅನುಕೂಲವಾಗುವ ದೃಷ್ಟಿಯಿಂದ ಕೋವಿಡ್ ವಾರ್ಡ್ ನಲ್ಲಿ ಪುಟ್ರ ಗ್ರಂಥಾಲಯದ ವ್ಯವಸ್ಥೆಯನ್ನು ಮಾಡಲಾಗಿದ್ದು, ಈ ಗ್ರಂಥಾಲಯವನ್ನು ಉದ್ಘಾಟನೆ ಮಾಡಲಾಗಿದೆ. 

ಕೊರೊನಾ ಸೋಂಕಿತರಲ್ಲಿ ಆತಂಕ, ಏಕಾಂಗಿತನವನ್ನು ದೂರ ಮಾಡಿ ಮಾನಸಿಕವಾಗಿ ಸದೃಢರಾಗಿರಲು ಸಹಕಾರಿಯಾಗಲೆಂದು ಈ ಗ್ರಂಥಾಲಯ ಪ್ರಾರಂಭಿಸಲಾಗಿದೆ. 

ಶಿವಮೊಗ್ಗ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಸಿಮ್ಸ್) ಮತ್ತು ಮೆಗ್ಗಾನ್ ಜಿಲ್ಲಾ ಆಸ್ಪತ್ರೆಯ ನಿರ್ದೇಶಕ ಡಾ.ಶ್ರೀಧರ್ ಅವರು ಮಾತನಾಡಿ, ಸೋಂಕಿನಿಂದ ಚೇತರಿಸಿಕೊಳ್ಳುವ ಸಂದರ್ಭದಲ್ಲಿ ರೋಗಿಗಳು ವಿಶ್ರಾಂತಿ ಪಡೆಯಲು ಗ್ರಂಥಾಲಯಗಳನ್ನು ಸ್ಥಾಪಿಸಲಾಗಿದೆ ಎಂದು ಹೇಳಿದ್ದಾರೆ. 

ಸೋಂಕಿಗೆ ಚಿಕಿತ್ಸೆ ಪಡೆಯಲು ಬರುವ ಬಹುತೇಕ ರೋಗಿಗಳು ಆತಂಕ, ಒತ್ತಡದಲ್ಲಿರುತ್ತಾರೆ. ಇಂತಹ ಸಂದರ್ಭದಲ್ಲಿ ಪುಸ್ತಕಗಳನ್ನು ಓದುವುದರಿಂದ ಒತ್ತಡ ದೂರಾಗುತ್ತದೆ ಎಂದು ತಿಳಿಸಿದ್ದಾರೆ. 

ಗ್ರಂಥಾಲಯದಲ್ಲಿ ಸಾವಿರಾರು ಪುಸ್ತಕಗಳಿವೆ. ಪುಸ್ತಕಗಳನ್ನು ಹತ್ತಿರದಲ್ಲಿರುವ ಮುದ್ರಕ ಸಂಸ್ಥೆಗಳು, ಪ್ರಕಾಶಕರು ಹಾಗೂ ಪುಸ್ತಕ ಮಳಿಗೆಗಳು ಉಡುಗೊರೆಯಾಗಿ ನೀಡಿವೆ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com