ವಿದ್ಯಾಗಮ ವಿರುದ್ಧದ ಲಾಬಿ ಗೆದಿದ್ದೆ- ಹಿರಿಯ ಅಧಿಕಾರಿಗಳು

ಖಾಸಗಿ ಶಾಲೆಗಳು ಮತ್ತು ಶಿಕ್ಷಕರ ದೊಡ್ಡ ಲಾಬಿಯಿಂದಾಗಿ ವಿದ್ಯಾಗಮ ಯೋಜನೆಯನ್ನು ರಾಜ್ಯಸರ್ಕಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ ಎಂದು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಿದ್ಯಾಗಮ ಯೋಜನೆ
ವಿದ್ಯಾಗಮ ಯೋಜನೆ

ಬೆಂಗಳೂರು: ಖಾಸಗಿ ಶಾಲೆಗಳು ಮತ್ತು ಶಿಕ್ಷಕರ ದೊಡ್ಡ ಲಾಬಿಯಿಂದಾಗಿ ವಿದ್ಯಾಗಮ ಯೋಜನೆಯನ್ನು ರಾಜ್ಯಸರ್ಕಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ ಎಂದು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೆಲವು ಕಡೆಗಳಲ್ಲಿ ವಿದ್ಯಾಗಮ ಯೋಜನೆ ಸಂಪೂರ್ಣವಾಗಿ ಯಶಸ್ವಿಯಾಗಿತ್ತು. ಆದಾಗ್ಯೂ, ಶಿಕ್ಷಕರ ಕ್ಷೇತ್ರದ ಚುನಾವಣೆ ಹತ್ತಿರುವಂತೆಯೇ ಸರ್ಕಾರಿ ಮತ್ತು ಖಾಸಗಿ ಶಿಕ್ಷಕರ ಲಾಬಿಯಿಂದಾಗಿ ಈ ಕಾರ್ಯಕ್ರಮ ಸ್ಥಗಿತಗೊಂಡಿರುವುದಾಗಿ ಅವರು ಹೇಳಿದ್ದಾರೆ.

ಸಾಂಕ್ರಾಮಿಕ ರೋಗದಿಂದಾಗಿ ಸಂಕಷ್ಟದಲ್ಲಿರುವ ಆರ್ಥಿಕವಾಗಿ ದುರ್ಬಲ ಮಕ್ಕಳಿಗೆ ವಿದ್ಯಾಗಮ ಯೋಜನೆಯನ್ನು ಸ್ಥಗಿತಗೊಳಿಸಿರುವುದು ಒಳ್ಳೆಯದಲ್ಲ, ಸರ್ಕಾರಿ ಶಾಲೆಗಳು ಶಿಕ್ಷಣದ ಜೊತೆಗೆ ಹಾಲು, ಮಧ್ಯಾಹ್ನ ಊಟ, ಆರೋಗ್ಯ ತಪಾಸಣೆ ಮತ್ತಿತರ ಸೌಲಭ್ಯ ಒದಗಿಸಬೇಕು, ಈ ಕಾರ್ಯಕ್ರಮವನ್ನು ಮತ್ತೆ ಆರಂಭಿಸಬೇಕೆಂದು ಮುಖ್ಯಮಂತ್ರಿಯನ್ನು ಶಿಕ್ಷಣ ತಜ್ಞ ಡಾ. ನಿರಂಜನಾರಾದ್ಯ ಒತ್ತಾಯಿಸಿದ್ದಾರೆ.

ಸರ್ಕಾರಿ ಶಾಲೆಯಲ್ಲಿ ಎಸ್ ಸಿ, ಎಸ್ ಟಿ ಮತ್ತು ಒಬಿಸಿ ವಿದ್ಯಾರ್ಥಿಗಳು ಹೆಚ್ಚಿನ ಪ್ರಮಾಣದಲ್ಲಿ ಇರುತ್ತಾರೆ. ಅಂತಹ ಶಿಕ್ಷಣ ನಿರಾಕರಿಸುವ ಮೂಲಕ ಮತ್ತೆ ಜಾತಿ ಆಧಾರಿತ ಕೆಲಸಗಳನ್ನು ಕಳುಹಿಸುವ ಹುನ್ನಾರ ಸರ್ಕಾರದ ನಿರ್ಧಾರವಾಗಿದೆ ಎಂದು ಸಾಮಾಜಿಕ ನೀತಿ ಸಂಶೋಧಕ ಸಿಂಥಿಯಾ ಸ್ಟೀಫನ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com