ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಎಂಬಂತೆ ಸರ್ಕಾರ ವರ್ತನೆ- ಎಚ್.ಡಿ.ಕುಮಾರಸ್ವಾಮಿ

ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಎಂಬಂತೆ ಸರ್ಕಾರ ವರ್ತಿಸುತ್ತಿದೆ. ಕೊರೋನಾ ಸಂಕಷ್ಟದ ಸಮಯದಲ್ಲೂ ರಾಜ್ಯದ ಸರಕಾರಿ ಹಾಗೂ ಖಾಸಗಿ ಶಾಲೆಗಳ ಶಿಕ್ಷಕರು ಶಾಲೆಗಳಿಗೆ ತೆರಳಿ ಕೆಲಸ ಮಾಡುತ್ತಿದ್ದಾರೆ.
ಎಚ್. ಡಿ. ಕುಮಾರಸ್ವಾಮಿ
ಎಚ್. ಡಿ. ಕುಮಾರಸ್ವಾಮಿ

ಬೆಂಗಳೂರು: ಎತ್ತಿಗೆ ಜ್ವರ ಬಂದರೆ ಕೋಣಕ್ಕೆ ಬರೆ ಎಂಬಂತೆ ಸರ್ಕಾರ ವರ್ತಿಸುತ್ತಿದೆ. ಕೊರೋನಾ ಸಂಕಷ್ಟದ ಸಮಯದಲ್ಲೂ ರಾಜ್ಯದ ಸರಕಾರಿ ಹಾಗೂ ಖಾಸಗಿ ಶಾಲೆಗಳ ಶಿಕ್ಷಕರು ಶಾಲೆಗಳಿಗೆ ತೆರಳಿ ಕೆಲಸ ಮಾಡುತ್ತಿದ್ದಾರೆ.

ಕೊರೋನಾ ಕಾರಣಕ್ಕೆ ಮಕ್ಕಳು ಶಾಲೆಗೆ ಬಾರದಿದ್ದರೂ ಶಿಕ್ಷಕರನ್ನು ಅನ್ಯ ಸೇವೆಗೆ ಯಥೇಚ್ಛವಾಗಿ ಬಳಸಲಾಗುತ್ತಿದೆ. ಆದಾಗ್ಯೂ ಮಧ್ಯಂತರ ರಜೆ ರದ್ದುಪಡಿಸಿ ಸರಕಾರ ಯಾವ ಪುರುಷಾರ್ಥ ಸಾಧನೆಗೆ ಹೊರಟಿದೆ? ಎಂದು ಪ್ರಶ್ನಿಸಿದ್ದಾರೆ.

ಶಿಕ್ಷಕ ಸಮೂಹವನ್ನು ಗೌರವದಿಂದ ನಡೆಸಿಕೊಳ್ಳಬೇಕಾದ ಸರಕಾರ, ದರ್ಪದ ಆದೇಶಗಳನ್ನು ಜಾರಿ ಮಾಡಿ,ಶಾಪಕ್ಕೆ ಗುರಿಯಾಗುತ್ತಿದೆ. 'ಹರ ಮುನಿದರೂ ಗುರು ಕಾಯ್ವನು' ಎಂಬುದನ್ನು ಸರಕಾರ ಮರೆಯಬಾರದು ಎಂದಿದ್ದಾರೆ.

ರಾಜ್ಯ ಸರ್ಕಾರ ಅಕ್ಟೋಬರ್ 1ರಂದು ಮಧ್ಯಂತರ ರಜಾ ರದ್ದುಪಡಿಸಿ ಹೊರಡಿಸಿರುವ ಆದೇಶವನ್ನು ಕೂಡಲೇ ವಾಪಸ್ ಪಡೆದು ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com