ಅತ್ಯಾಚಾರ ಆರೋಪಿಯ ಕಾಲಿಗೆ ಗುಂಡಿಕ್ಕಿ ಬಂಧಿಸಿದ ಪೊಲೀಸರು

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿರುವ ಘಟನೆ ಆರ್ ಆರ್ ಕೆ ಕಲ್ಯಾಣ ಮಂಟಪದ ಬಳಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು; ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿರುವ ಘಟನೆ ಆರ್ ಆರ್ ಕೆ ಕಲ್ಯಾಣ ಮಂಟಪದ ಬಳಿ ನಡೆದಿದೆ.

ಚೆನ್ನೈ ಮೂಲದ ದಿನೇಶ್ ಗುಂಡೇಟು ತಿಂದ ಆರೋಪಿ. ಆರೋಪಿ ದಿನೇಶ್ ಕಳೆದ ದಿನದ ಹಿಂದೆ ನಾಲ್ಕು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿ ಪರಾರಿಯಾಗಿದ್ದನು. 

ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ವಿಭಾಗದ ಪೊಲೀಸರು ಆತನಿಗೆ ಬಲೆ ಬೀಸಿದ್ದರು. ಖಚಿತ ಮಾಹಿತಿ ಮೇರೆಗೆ ಇಂದು ಬೆಳಗಿನ ಜಾವ ಶ್ರೀರಾಮಪುರ ಪೊಲೀಸರು ಬಂಧಿಸಲು ತೆರಳಿದ್ದರು.

ಆರ್ ಆರ್ ಕಲ್ಯಾಣ ಮಂಟಪದ ಬಳಿ ಹೋದಾಗ ಆರೋಪಿ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ. ಹೀಗಾಗಿ ಶ್ರೀರಾಂಪುರ ಪೊಲೀಸ್ ಠಾಣೆ ಇನ್ ಸ್ಪೆಕ್ಟರ್ ಸುನೀಲ್ ನಾಯ್ಕ ಆರೋಪಿಯ ಕಾಲಿಗೆ ಗುಂಡೇಟು ಹೊಡೆದು ನಂತರ ಆತನನ್ನು ಬಂಧಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com