40 ಕೆಜಿ ಶ್ರೀಗಂಧ ಕದ್ದು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಭಾರೀ ಕಳ್ಳ!

ಶಿರಸಿಯ ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ಶ್ರೀಗಂಧದ ಮರಗಳನ್ನು ಕಳವು ಮಾಡುತ್ತಿದ್ದ ಕಳ್ಳನೊಬ್ಬನನ್ನು ಬಂಧನಕ್ಕೊಳಪಡಿಸಲಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಶಿರಸಿಯ ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ಶ್ರೀಗಂಧದ ಮರಗಳನ್ನು ಕಳವು ಮಾಡುತ್ತಿದ್ದ ಕಳ್ಳನೊಬ್ಬನನ್ನು ಬಂಧನಕ್ಕೊಳಪಡಿಸಲಾಗಿದೆ. 

ಈರಪ್ಪ ಅಲಿಯಾಸ್ ನಾಗಪ್ಪ ನಾಯಕ್ (52) ಬಂಧಿತ ಆರೋಪಿಯಾಗಿದ್ದಾನೆ. ಅರಣ್ಯಾಧಿಕಾರಿಗಳು ಗಸ್ತು ತಿರುಗುತ್ತಿದ್ದ ವೇಳೆ ಆರೋಪಿ ನಾಗಪ್ಪ ಶ್ರೀಗಂಧದ ಮರಗಳನ್ನು ಕಡಿಯುವ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. 

ಇದೀಗ ಆರೋಪಿ ವಿರುದ್ಧ 1963 ಮತ್ತು 1969ರ ಕರ್ನಾಟರ ಅರಣ್ಯ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಇದು ಜಾಮೀನು ರಹಿತ ಅಪರಾಧವಾಗಿದೆ. ಆರೋಪಿಯನ್ನು ನ್ಯಾಯಾಲಯದ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಸಾಗರ ತಾಲೂಕಿನ ನಿವಾಸಿಯಾಗಿರುವ ಆರೋಪಿ ಕನಗೋಡಿ ಮೀಸಲು ಅರಣ್ಯ ಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿ ಮರಗಳನ್ನು ಕಡಿಯುತ್ತಿದ್ದ. ಈ ವೇಳೆ ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಆರೋಪಿಯನ್ನು ರೆಡ್ ಹ್ಯಾಂಡ್ ಆಗಿ ಬಂಧನಕ್ಕೊಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com