ಮೈಸೂರು: ಕೋವಿಡ್-19 ಚಿಕಿತ್ಸೆಗಾಗಿ ಹಾಸಿಗೆ ಸಂಖ್ಯೆ ಹೆಚ್ಚಳಕ್ಕೆ ಕ್ರಮವಹಿಸಲು ಸಚಿವ ಡಾ. ಕೆ.ಸುಧಾಕರ್ ಸೂಚನೆ

ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಒಟ್ಟು 590 ಹಾಸಿಗೆ ಗಳು ಲಭ್ಯವಿದ್ದು,ಇನ್ನು ಒಂದು ವಾರದಲ್ಲಿ ಹೆಚ್ಚುವರಿಯಾಗಿ 428 ಹಾಸಿಗೆ ಅಳವಡಿಸಲಾಗುವುದು ಎಂದು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಸುಧಾಕರ್
ಸುಧಾಕರ್

ಮೈಸೂರು: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಒಟ್ಟು 590 ಹಾಸಿಗೆ ಗಳು ಲಭ್ಯವಿದ್ದು,ಇನ್ನು ಒಂದು ವಾರದಲ್ಲಿ ಹೆಚ್ಚುವರಿಯಾಗಿ 428 ಹಾಸಿಗೆ ಅಳವಡಿಸಲಾಗುವುದು ಎಂದು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿ ಮಾತನಾಡಿದ ಅವರು, ಆಸ್ಪತ್ರೆಗಳಲ್ಲಿ ಹಾಸಿಗೆ ಕೊರತೆ ಉಂಟಾಗದಂತೆ ಎಚ್ಚರವಹಿಸಿ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಕೋವಿಡ್ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯಗ ಳೊಂದಿಗೆ ಅಗತ್ಯ ವೈದ್ಯಕೀಯ ಸಲಕರಣೆಗಳನ್ನು ಅಳವಡಿಸಿ ಚಿಕಿತ್ಸೆ ಪ್ರಮಾಣವನ್ನು ಹೆಚ್ಚಿಸಬೇಕು ಹಾಗೂ ಸೋಂಕು ಧೃಡಪಟ್ಟ ವ್ಯಕ್ತಿಗಳಿಗೆ ಸೂಕ್ತ ಚಿಕಿತ್ಸೆ ನೀಡಿ ಗುಣಮುಖರಾಗುವಂತೆ ಕ್ರಮ ಕೈಗೊಳ್ಳಿ ಎಂದರು.

ವೈದ್ಯಕೀಯ ಕಾಲೇಜುಗಳಲ್ಲಿ 178, ಜಿಲ್ಲಾಸ್ಪತ್ರೆಗಳಲ್ಲಿ 250,ಟ್ರಾ ಮಾ ಸೆಂಟರ್ ಗಳಲ್ಲಿ 260, 6 ತಾಲೂಕು ಆಸ್ಪತ್ರೆಗಳಲ್ಲಿ 50 ಹಾಸಿಗೆ ಸೇರಿ ಜಿಲ್ಲೆಯಲ್ಲಿ ಒಟ್ಟು 1,318 ಹಾಸಿಗೆಗಳು ಕೋವಿಡ್ ಗೆ ಲಭ್ಯವಾಗಲಿದೆ.ಜೆಎಸ್‍ಎಸ್ ಸಂಸ್ಥೆಯಿಂದ 400 ಹಾಸಿಗೆ ದೊರೆಯಲಿದ್ದು,ಒಟ್ಟು 1,718 ಹಾಸಿಗೆ ಕೋವಿಡ್ ಚಿಕಿತ್ಸೆಗೆ ಸಿಗಲಿದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com