ಗಂಗಾವತಿಯಲ್ಲಿ ನೂತನ ಕೃಷಿ ಮಹಾವಿದ್ಯಾಲಯ ಸ್ಥಾಪಿಸಲು ಸಿಎಂಗೆ ಬಿ.ಸಿ. ಪಾಟೀಲ್ ಪ್ರಸ್ತಾವನೆ

ಕೊಪ್ಪಳ ಜಿಲ್ಲೆ ಗಂಗಾವತಿ ನಗರದ ಕೃಷಿ ಸಂಶೋಧನಾ ಕೇಂದ್ರದ ಆವರಣದಲ್ಲಿ ನೂತನ ಕೃಷಿ ಮಹಾವಿದ್ಯಾಲಯ ಸ್ಥಾಪಿಸುವಂತೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ.
ಬಿಸಿ ಪಾಟೀಲ್
ಬಿಸಿ ಪಾಟೀಲ್

ಬೆಂಗಳೂರು: ಕೊಪ್ಪಳ ಜಿಲ್ಲೆ ಗಂಗಾವತಿ ನಗರದ ಕೃಷಿ ಸಂಶೋಧನಾ ಕೇಂದ್ರದ ಆವರಣದಲ್ಲಿ ನೂತನ ಕೃಷಿ ಮಹಾವಿದ್ಯಾಲಯ ಸ್ಥಾಪಿಸುವಂತೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಗಂಗಾವತಿ ನೀರಾವರಿ ಮತ್ತು ಒಣಭೂಮಿ ಹೊಂದಿರುವ ಪ್ರದೇಶವಾಗಿದ್ದು, ಇಲ್ಲಿನ ಮಣ್ಣು ಮತ್ತು ನೀರು ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಸೂಕ್ತವಾಗಿದೆ. ಅಲ್ಲದೇ ಜಿಲ್ಲೆಯು ಕೃಷಿ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿದೆ. ಜಿಲ್ಲೆಯಲ್ಲಿ ಎರಡು ಕೃಷಿ ಸಂಶೋಧನಾ ಕೇಂದ್ರಗಳು, ಒಂದು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ಹಾಗೂ ಒಂದು ಕೃಷಿ ವಿಜ್ಞಾನ ಕೇಂದ್ರವಿದ್ದು, ಒಟ್ಟು 19 ವಿಜ್ಞಾನಿಗಳು ಮತ್ತು 20 ಶಿಕ್ಷಕೇತರ ಸಿಬ್ಬಂದಿಗಳಿದ್ದು, ಕೃಷಿ ಮಹಾವಿದ್ಯಾಲಯ ಸ್ಥಾಪನೆಗೆ ಬೇಕಾದ ಎಲ್ಲಾ ರೀತಿಯ ಅನುಕೂಲವನ್ನು ಹೊಂದಿದೆ ಎಂದು ಪ್ರಸ್ತಾವನೆಯಲ್ಲಿ ತಿಳಿಸಿದ್ದಾರೆ.

ಕೃಷಿಗೆ ಪೂರಕವಾದ ವಾತಾವರಣವನ್ನು ಹೊಂದಿರುವ ಜಿಲ್ಲೆಯಲ್ಲಿ ಕೃಷಿ ಮಹಾವಿದ್ಯಾಲಯದ ಅಗತ್ಯವಿದೆ. ಕೊಪ್ಪಳ ಜಿಲ್ಲೆಯ ವಿದ್ಯಾರ್ಥಿಗಳು ಕೃಷಿ ಪದವಿ ಹೊಂದಲು 140 ಕಿ.ಮೀ. ದೂರದ ರಾಯಚೂರಿಗೆ ಇಲ್ಲವೇ 220 ಕಿ.ಮೀ ದೂರದಲ್ಲಿರುವ ಧಾರವಾಡಕ್ಕೆ ಹೋಗಬೇಕಾದ ಅನಿವಾರ್ಯತೆಯಿದೆ. ಇದರಿಂದ ಕೃಷಿ ಪದವಿ ತಂತ್ರಜ್ಞಾನ ಸಂಬಂಧ ಅಧ್ಯಯನಕ್ಕೆ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದ್ದು, ಕೊಪ್ಪಳದಲ್ಲಿಯೇ ಕೃಷಿ ಮಹಾವಿದ್ಯಾಲಯ ಸ್ಥಾಪಿಸುವುದರಿಂದ ಅನುಕೂಲವಾಗಲಿದೆ ಎಂದು ಪ್ರಸ್ತಾವನೆಯಲ್ಲಿ ಉಲ್ಲೇಖಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com