ಕಲಬುರಗಿ ಜಿಲ್ಲೆಯಲ್ಲಿ ಭಾರಿ ಮಳೆ: 48 ಕಾಳಜಿ ಕೇಂದ್ರ ಸ್ಥಾಪನೆ- ಜಿಲ್ಲಾಧಿಕಾರಿ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಕಲಬುರಗಿ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿಯಿಂದ ಸುರಿದ ಭಾರಿ ಮಳೆಯಿಂದ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿ ನಿರಾಶ್ರಿತಗೊಂಡ ಜನರಿಗೆ ಜಿಲ್ಲೆಯಾದ್ಯಂತ 48 ಕಾಳಜಿ ಕೇಂದ್ರ ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ತಿಳಿಸಿದ್ದಾರೆ.

Published: 15th October 2020 11:39 AM  |   Last Updated: 15th October 2020 12:21 PM   |  A+A-


Casualimage1

ಸಾಂದರ್ಭಿಕ ಚಿತ್ರ

Posted By : Nagaraja AB
Source : UNI

ಕಲಬುರಗಿ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಕಲಬುರಗಿ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿಯಿಂದ ಸುರಿದ ಭಾರಿ ಮಳೆಯಿಂದ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿ ನಿರಾಶ್ರಿತಗೊಂಡ ಜನರಿಗೆ ಜಿಲ್ಲೆಯಾದ್ಯಂತ 48 ಕಾಳಜಿ ಕೇಂದ್ರ ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ತಿಳಿಸಿದ್ದಾರೆ.

ಕಲಬುರಗಿ, ಕಮಲಾಪೂರ ಹಾಗೂ ಅಫಜಲಪುರ ತಾಲೂಕಿನಲ್ಲಿ ತಲಾ 3, ಆಳಂದ ತಾಲೂಕಿನಲ್ಲಿ 4, ಜೇವರ್ಗಿ ತಾಲೂಕಿನಲ್ಲಿ 1, ಚಿತ್ತಾಪುರ ಮತ್ತು ಸೇಡಂ ತಾಲೂಕಿನಲ್ಲಿ ತಲಾ 5, ಶಹಾಬಾದ ತಾಲೂಕಿನಲ್ಲಿ 4, ಕಾಳಗಿ ತಾಲೂಕಿನಲ್ಲಿ 8 ಹಾಗೂ ಚಿಂಚೋಳಿ ತಾಲೂಕಿನಲ್ಲಿ 12 ಸೇರಿದಂತೆ ಒಟ್ಟಾರೆ 48 ಕಾಳಜಿ ಕೇಂದ್ರ ತೆರೆದು 7603 ಜನರಿಗೆ ಆಶ್ರಯ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬುಧವಾರ ರಾತ್ರಿ 8 ಗಂಟೆ ವರೆಗಿನ ಅಂದಾಜಿನ ಪ್ರಕಾರ ಜಿಲ್ಲೆಯ 4819 ಮನೆಗಳಿಗೆ ಪ್ರವಾಹದ ನೀರು ನುಗ್ಗಿ ಬಟ್ಟೆ-ಪಾತ್ರೆಗಳು ಹಾನಿಗೊಳಗಾಗಿವೆ. 1058 ಮನೆಗಳಿಗೂ ಭೀಕರ ಮಳೆ ಹಾನಿ ಮಾಡಿದೆ. ಇದಲ್ಲದೆ 518 ಜಾನುವಾರಗಳ ಜೀವ ಹಾನಿ ಬಗ್ಗೆಯೂ ವರದಿಯಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಭೀಮಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಮಹಾರಾಷ್ಟ್ರದ ಉಜನಿ ಮತ್ತು ವೀರ್ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಭೀಮಾ ನದಿಗೆ ಬಿಟ್ಟಿರುವುದರಿಂದ ಸೊನ್ನ ಬ್ಯಾರೇಜಿಗೆ 1 ಲಕ್ಷದ 98 ಸಾವಿರ  ಕ್ಯುಸೆಕ್ ನೀರು ಒಳ ಹರಿವಾಗಿ ಬರುತ್ತಿದ್ದು, ಗುರುವಾರ ಬೆಳಿಗ್ಗೆ 8 ಗಂಟೆಗೆ ಸೊನ್ನ ಬ್ಯಾರೇಜಿನಿಂದ ಭೀಮಾ ನದಿಗೆ 2 ಲಕ್ಷದ  23 ಸಾವಿರ ಕ್ಯುಸೆಕ್ ನೀರು ಹರಿಬಿಡಲಾಗಿದೆ ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತ ಕಲಬುರಗಿ ವೃತ್ತದ ಅಧೀಕ್ಷಕ ಅಭಿಯಂತ ಜಗನ್ನಾಥ ಹಲಿಂಗೆ ತಿಳಿಸಿದ್ದಾರೆ.

ಬ್ಯಾರೇಜಿನ ಕೆಳ ಪಾತ್ರದಲ್ಲಿ ಬರುವ ಅಫಜಲಪೂರ, ಚಿತ್ತಾಪುರ, ಜೇವರ್ಗಿ ಹಾಗೂ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ನದಿ ಪಾತ್ರದ ಜನರು ನದಿ ದಂಡೆಗೆ ಹೋಗಬಾರದು ಮತ್ತು ತಮ್ಮ ಜಾನುವಾರಗಳೊಂದಿಗೆ ಸುರಕ್ಷತಾ ಕ್ರಮದೊಂದಿಗೆ ಎಚ್ಚರಿಕೆಯಿಂದಿರುವಂತೆ ಸಾರ್ವಜನಿಕರಲ್ಲಿ ಅವರು ಮನವಿ ಮಾಡಿದ್ದಾರೆ.

Stay up to date on all the latest ರಾಜ್ಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp