ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯರ ಬೆತ್ತಲೆ ಫೋಟೋ ಹಾಕುತ್ತಿದ್ದ ಆರೋಪಿ ಬಂಧನ
ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಆರೋಪಿ ಜಗದೀಶ್ (32) ಎಂಬಾತನನ್ನು ವೈಟ್‌ಫೀಲ್ಡ್ ವಿಭಾಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.
Published: 15th October 2020 09:53 AM | Last Updated: 15th October 2020 09:53 AM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಆರೋಪಿ ಜಗದೀಶ್ (32) ಎಂಬಾತನನ್ನು ವೈಟ್‌ಫೀಲ್ಡ್ ವಿಭಾಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ಕಾಡುಗೋಡಿ ನಿವಾಸಿ ಜಗದೀಶ್, ಖಾಸಗಿ ಕಂಪನಿ ಉದ್ಯೋಗಿ. ಹಲವು ತಿಂಗಳಿನಿಂದ ಕೃತ್ಯ ಎಸಗುತ್ತಿದ್ದ. ಆತನ ವಿರುದ್ಧ ಯುವತಿಯರಿಬ್ಬರು ಇತ್ತೀಚೆಗೆ ದೂರು ನೀಡಿದ್ದರು ಎಂದು ಪೊಲೀಸರು ಹೇಳಿದರು.
‘ಯುವತಿಯರ ಫೋಟೊ ಬಳಸಿಕೊಂಡು ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಂ ನಲ್ಲಿ ನಕಲಿ ಖಾತೆ ತೆರೆದಿದ್ದ ಆರೋಪಿ, ಯುವತಿಯರ ಸ್ನೇಹ ಸಂಪಾದಿಸುತ್ತಿದ್ದ. ಅವರ ಜೊತೆ ಚಾಟಿಂಗ್ ಮಾಡಿ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ, ನಂತರ ಅವರ ಬೆತ್ತಲೆ ಫೋಟೋಗಳನ್ನು ಕಳುಹಿಸುವಂತೆ ಒತ್ತಾಯ ಮಾಡುತ್ತಿದ್ದ. ನಂತರ ಅವರ ಫೋನ್ ನಂಬರ್ ಪಡೆದು ಅಶ್ಲೀಲ ಸಂದೇಶ ರವಾನಿಸುತ್ತಿದ್ದ, ಇದರ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯರ ಫೋಟೋ ಮತ್ತು ಫೋನ್ ನಂಬರ್ ಹಾಕಿ ಅವರನ್ನು ಕೆಟ್ಟದ್ದಾಗಿ ಬಿಂಬಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಸುಮಾರು 17 ಯುವತಿಯರು ಈತನಿಂದ ಕಿರುಕುಳಕ್ಕೊಳಗಾಗಿದ್ದಾರೆ. ಟೆಕ್ನಿಷಿಯನ್ ಗಳ ಸಹಾಯ ಪಡೆದು ಆತನನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ನಂತರ ಆತನಿಂದ ಮೊಬೈಲ್ ಜಪ್ತಿ ಮಾಡಲಾಗಿದೆ’ ಎಂದೂ ಪೊಲೀಸರು ತಿಳಿಸಿದರು