ಸ್ಯಾಂಡಲ್ ವುಡ್ ಡ್ರಗ್ ಕೇಸು: ಆದಿತ್ಯ ಆಳ್ವ ಸೋದರಿ ಪ್ರಿಯಾಂಕ ಆಳ್ವ ಒಬೆರಾಯ್ ಗೆ ಸಿಸಿಬಿ ನೊಟೀಸ್

ಸ್ಯಾಂಡಲ್ ವುಡ್ ಡ್ರಗ್ ಕೇಸಿಗೆ ಸಂಬಂಧಿಸಿದಂತೆ ಕೇಂದ್ರ ಅಪರಾಧ ದಳ(ಸಿಸಿಬಿ) ಇದೀಗ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ಪತ್ನಿ ಹಾಗೂ ಆದಿತ್ಯ ಆಳ್ವ ಸೋದರಿ ಪ್ರಿಯಾಂಕಾ ಆಳ್ವ ಒಬೆರಾಯ್ ಗೆ ನೊಟೀಸ್ ನೀಡಿದೆ.
ನಟ ವಿವೇಕ್ ಒಬೆರಾಯ್, ಪ್ರಿಯಾಂಕಾ ಆಳ್ವ ಒಬೆರಾಯ್ ಮತ್ತು ಆದಿತ್ಯ ಆಳ್ವ(ಸಂಗ್ರಹ ಚಿತ್ರ)
ನಟ ವಿವೇಕ್ ಒಬೆರಾಯ್, ಪ್ರಿಯಾಂಕಾ ಆಳ್ವ ಒಬೆರಾಯ್ ಮತ್ತು ಆದಿತ್ಯ ಆಳ್ವ(ಸಂಗ್ರಹ ಚಿತ್ರ)

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ ಕೇಸಿಗೆ ಸಂಬಂಧಿಸಿದಂತೆ ಕೇಂದ್ರ ಅಪರಾಧ ದಳ(ಸಿಸಿಬಿ) ಇದೀಗ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ಪತ್ನಿ ಹಾಗೂ ಆದಿತ್ಯ ಆಳ್ವ ಸೋದರಿ ಪ್ರಿಯಾಂಕಾ ಆಳ್ವ ಒಬೆರಾಯ್ ಗೆ ನೊಟೀಸ್ ನೀಡಿದೆ.

ಡ್ರಗ್ ಕೇಸಿನ ವಿಚಾರಣೆ ಆರಂಭವಾದಾಗಿನಿಂದ ಮಾಜಿ ಸಚಿವ ಜೀವರಾಜ್ ಆಳ್ವ ಪುತ್ರ ಆದಿತ್ಯ ಆಳ್ವ ಹೆಸರು ಕೇಳಿಬರುತ್ತಿದ್ದು, ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಆದಿತ್ಯ ಆಳ್ವ ವಿರುದ್ಧ ಈಗಾಗಲೇ ಲುಕ್ ಔಟ್ ನೊಟೀಸ್ ಜಾರಿ ಮಾಡಲಾಗಿದ್ದು ಪೊಲೀಸರು ಆತನಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.

ಕಳೆದ ತಿಂಗಳು ನಗರದ ಹೆಬ್ಬಾಳ ಬಳಿ ಇರುವ ಆದಿತ್ಯ ಆಳ್ವಗೆ ಸೇರಿದ ರೆಸಾರ್ಟ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಹಲವು ಮಹತ್ವದ ಅಂಶಗಳನ್ನು, ದಾಖಲೆಗಳನ್ನು ಕಲೆ ಹಾಕಿದ್ದರು.

ಆದಿತ್ಯ ಆಳ್ವ, ಮುಂಬೈಯಲ್ಲಿರುವ ತನ್ನ ಸೋದರಿ ಪ್ರಿಯಾಂಕ ಆಳ್ವ ಒಬೆರಾಯ್ ಮನೆಯಲ್ಲಿ ಆಶ್ರಯ ಪಡೆದಿದ್ದಾನೆ ಎಂಬ ಮಾಹಿತಿ ಸಿಕ್ಕಿದ ಹಿನ್ನೆಲೆಯಲ್ಲಿ ನಿನ್ನೆ ಕೋರ್ಟ್ ನಿಂದ ಸರ್ಚ್ ವಾರಂಟ್ ಪಡೆದು ಬೆಂಗಳೂರು ಸಿಸಿಬಿ ಪೊಲೀಸರು ಮುಂಬೈಯಲ್ಲಿರುವ ನಟ ವಿವೇಕ್ ಒಬೆರಾಯ್ ಮನೆ ಮೇಲೆ ದಾಳಿ ನಡೆಸಿದ್ದರು.

ಇದೀಗ ಸೋದರ ಆದಿತ್ಯ ಆಳ್ವಗೆ ರಕ್ಷಣೆ ನೀಡಿರುವ ಶಂಕೆ ಮೇಲೆ ಪ್ರಿಯಾಂಕಾ ಆಳ್ವಗೆ ನೊಟೀಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com