ಹಣಕಾಸು ಇಲಾಖೆಯ ಆಕ್ಷೇಪ, ಕೋವಿಡ್-19 ಪರಿಸ್ಥಿತಿಯಿಂದಾಗಿ ಉಪನ್ಯಾಸಕರಿಗೆ ನೇಮಕಾತಿ ಪತ್ರ ನೀಡಲು ಸಾಧ್ಯವಾಗಿಲ್ಲ: ಡಿಸಿಎಂ

ಹಣಕಾಸು ಇಲಾಖೆಯ ಆಕ್ಷೇಪ ಹಾಗೂ ಕೊರೋನಾ ಪರಿಸ್ಥಿತಿಯಿಂದಾಗಿ ಆಯ್ಕೆಯಾಗಿರುವ ಉಪನ್ಯಾಸಕರಿಗೆ ನೇಮಕಾತಿ ಪತ್ರ ನೀಡಲು ಸಾಧ್ಯವಾಗಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿಎನ್.ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ. 
ಉನ್ನತ ಶಿಕ್ಷಣ ಸಚಿವ ಡಾ.ಸಿಎನ್.ಅಶ್ವತ್ಥ್ ನಾರಾಯಣ್
ಉನ್ನತ ಶಿಕ್ಷಣ ಸಚಿವ ಡಾ.ಸಿಎನ್.ಅಶ್ವತ್ಥ್ ನಾರಾಯಣ್

ಬೆಂಗಳೂರು: ಹಣಕಾಸು ಇಲಾಖೆಯ ಆಕ್ಷೇಪ ಹಾಗೂ ಕೊರೋನಾ ಪರಿಸ್ಥಿತಿಯಿಂದಾಗಿ ಆಯ್ಕೆಯಾಗಿರುವ ಉಪನ್ಯಾಸಕರಿಗೆ ನೇಮಕಾತಿ ಪತ್ರ ನೀಡಲು ಸಾಧ್ಯವಾಗಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿಎನ್.ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ. 

ನೇಮಕಾತಿ ಪತ್ರ ನೀಡಬೇಕೆಂದು ಒತ್ತಾಯಿಸಿ ಬೆಂಗಳೂರಿನ ಪಿಯುಸಿ ಮಂಡಳಿ ಎದುರು ಧರಣಿ ನಡೆಸುತ್ತಿರುವ ಭಾವಿ ಉಪನ್ಯಾಸಕರನ್ನು ಗುರುವಾರ ಭೇಟಿಯಾಗಿರುವ ಅಶ್ವತ್ಥ್ ನಾರಾಯಣ್ ಅವರು, ಹಣಕಾಸು ಇಲಾಖೆಯ ಕೆಲ ಆಕ್ಷೇಪಗಳು ಹಾಗೂ ಕೋವಿಡ್-19 ಪರಿಸ್ಥಿತಿಯಿಂದಾಗಿ ನೇಮಕಾತಿ ಪತ್ರಗಳನ್ನು ನೀಡುವುದು ತಡವಾಗಿದೆ. ಇದೀಗ ಸ್ವತಃ ಮುಖ್ಯಮಂತ್ರಿಗಳೇ ಹಣಕಾಸು ಇಲಾಕೆ ಎತ್ತಿದ್ದ ಆಕ್ಷೇಪಗಳನ್ನು ನಿವಾರಿಸಿ ಕಾಲೇಜುಗಳು ಆರಂಭವಾದ ಕೂಡಲೇ ನೇಮಕಾತಿ ಆದೇಶ ನೀಡುವುದಾಗಿ ಸೂಚಿಸಿದ್ದಾರೆಂದು ಹೇಳಿದ್ದಾರೆ. 

ಕೊರೋನಾ ಪರಿಸ್ಥಿತಿಯಿಂದಾಗಿ ದೇಶದ ಯಾವುದೇ ರಾಜ್ಯಗಳೂ ನೇಮಕಾತಿಗಳನ್ನು ಮಾಡಿಕೊಳ್ಳುತ್ತಿಲ್ಲ. ನಮ್ಮ ರಾಜ್ಯದಲ್ಲೂ ಕೂಡ ಎಲ್ಲಾ ಇಲಾಖೆಗಳ ನೇಮಕಾತಿಯನ್ನು ತಡೆಹಿಡಿದಿದೆ. ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಉಪನ್ಯಾಸಕರ ನೇಮಕಾತಿ ವಿಚಾರದಲ್ಲಿ ಎದುರಾಗುತ್ತಿರುವ ಎಲ್ಲಾ ಸಮಸ್ಯೆಗಳನ್ನು ದೂರಾಗಿಸಲು ಪ್ರಯತ್ನ ಮಡಾಲಿದೆ ಎಂದು ತಿಳಿಸಿದ್ದಾರೆ. 

ಕೇಂದ್ರ ಸರ್ಕಾರದ ನಿರ್ದೇಶನದಂತೆ ಕಾಲೇಜುಗಳ ತೆರೆಯಲು ಎಲ್ಲಾ ರೀತಿಯ ಸಿದ್ಥದೆಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು. 

ಉಪ ಮುಖ್ಯಮಂತ್ರಿಗಳು ಭರವಸೆ ನೀಡಿದ ಬಳಿಕವೂ ಕೂಡ ಪ್ರತಿಭಟನಾ ನಿರತ ಭಾವಿ ಉಪನ್ಯಾಸಕರು ಪ್ರತಿಭಟನೆಯನ್ನು ಕೈಬಿಡಲಿಲ್ಲ. ನೇಮಕಾತಿ ಪತ್ರ ಕೈ ಸೇರದ ಹೊರತು ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪಟ್ಟುಹಿಡಿದು ಕುಳಿತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com