ರಾಜ್ಯದಲ್ಲಿ ಕೊರೋನಾ ಇಳಿಮುಖ: ಸೋಂಕಿತ ಸಂಖ್ಯೆಯಿಂದ ಚೇತರಿಕೆ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಳ

ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು 7,012 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 7,65,586ಕ್ಕೆ ಏರಿಕೆಯಾಗಿದೆ.

Published: 18th October 2020 07:56 PM  |   Last Updated: 18th October 2020 07:56 PM   |  A+A-


Coronavirus

ಕೊರೋನಾ

Posted By : Vishwanath S
Source : Online Desk

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು 7,012 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 7,65,586ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 51 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 10,478ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 3,535 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 3,07,540ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಇಂದು 25 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.

ಇಂದು 8,344 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 6,45,825ಕ್ಕೆ ಏರಿಕೆಯಾಗಿದೆ. 1,09,264 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಪೈಕಿ 945 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Stay up to date on all the latest ರಾಜ್ಯ news
Poll
Farmers_Protest1

ಹೊಸ ಕೃಷಿ ಕಾನೂನುಗಳ ಬಗ್ಗೆ ರೈತರನ್ನು ದಾರಿ ತಪ್ಪಿಸಲಾಗುತ್ತಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp