ಸುಮಾರು ಏಳು ತಿಂಗಳ ನಂತರ ಸ್ವಕ್ಷೇತ್ರ ಶಿಕಾರಿಪುರಕ್ಕೆ ಆಗಮಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

ಸುಮಾರು ಏಳು ತಿಂಗಳ ಬಳಿಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ಸ್ವಕ್ಷೇತ್ರ ಶಿಕಾರಿಪುರಕ್ಕೆ ಆಗಮಿಸಿದ್ದಾರೆ.

Published: 18th October 2020 07:25 PM  |   Last Updated: 18th October 2020 07:26 PM   |  A+A-


CM_BSYediyurappa1

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

Posted By : Nagaraja AB
Source : ANI

ಶಿಕಾರಿಪುರ: ಸುಮಾರು ಏಳು ತಿಂಗಳ ಬಳಿಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ಸ್ವಕ್ಷೇತ್ರ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರಕ್ಕೆ ಆಗಮಿಸಿದ್ದಾರೆ.

ನಾಳೆ ಶಿಕಾರಿಪುರ ತಾಲೂಕಿನ ಕಸಬಾ ಏತ ನೀರಾವರಿ ಯೋಜನೆ, ಉಡುತಡಿಯಲ್ಲಿ ಶಿವಶರಣೆ ಅಕ್ಕಮಹಾದೇವಿ ಜನ್ಮ ಸ್ಥಳದ ಅಭಿವೃದ್ಧಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಗರಿಷ್ಠ ಪ್ರಮಾಣದ ಆರ್ಥಿಕ ನೆರವನ್ನು ವಿಸ್ತರಿಸಲಿದೆ ಎಂದರು.

ನವೆಂಬರ್ 3 ರಂದು ನಡೆಯಲಿರುವ ರಾಜರಾಜೇಶ್ವರಿ ಹಾಗೂ ಶಿರಾ ವಿಧಾನಸಭಾ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವ ವಿಶ್ವಾಸದಲ್ಲಿರುವುದಾಗಿ ಯಡಿಯೂರಪ್ಪ ತಿಳಿಸಿದರು.

Stay up to date on all the latest ರಾಜ್ಯ news
Poll
Congress logo

ನಾಯಕತ್ವದ ಕೊರತೆಯಿಂದಾಗಿ ಕಾಂಗ್ರೆಸ್ ಪಕ್ಷ ಒಡಕಿನತ್ತ ಸಾಗುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp