ಶಿವಮೊಗ್ಗ: ವಿಧಾನ ಪರಿಷತ್ ಸದಸ್ಯ ಪ್ರಸನ್ನಕುಮಾರ್ ಪುತ್ರ ಹೃದಯಾಘಾತದಿಂದ ನಿಧನ

ವಿಧಾನ ಪರಿಷತ್ ಸದಸ್ಯರಾದ ಕಾಂಗ್ರೆಸ್ ಮುಖಂಡ ಆರ್.ಪ್ರಸನ್ನ ಕುಮಾರ್ ಪುತ್ರ ಸುಹಾಸ್ (31)  ಹೃದಯಾಘಾತದಿಂದ ನಿಧನರಾಗಿದ್ದಾರೆ.
ಆರ್.ಪ್ರಸನ್ನ ಕುಮಾರ್ ಪುತ್ರ ಸುಹಾಸ್
ಆರ್.ಪ್ರಸನ್ನ ಕುಮಾರ್ ಪುತ್ರ ಸುಹಾಸ್

ಶಿವಮೊಗ್ಗ: ವಿಧಾನ ಪರಿಷತ್ ಸದಸ್ಯರಾದ ಕಾಂಗ್ರೆಸ್ ಮುಖಂಡ ಆರ್.ಪ್ರಸನ್ನ ಕುಮಾರ್ ಪುತ್ರ ಸುಹಾಸ್ (31)  ಹೃದಯಾಘಾತದಿಂದ ನಿಧನರಾಗಿದ್ದಾರೆ.

ಭಾನುವಾರ ಮುಂಜಾನೆ ಎದೆನೋವು ಕಾಣಿಸಿಕೊಂಡಿದ್ದು ಕುಸಿದು ಬಿದ್ದ ಸುಹಾಸ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಪ್ರಸನ್ನ ಕುಮಾರ್ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಇನ್ನು ಮೃತ ಸುಹಾಸ್ ಒಂದು ವರ್ಷದ ಹಿಂದಷ್ಟೇ ವಿವಾಹವಾಗಿದ್ದರು. 

ಇತ್ತ ಪ್ರಸನ್ನ ಕುಮಾರ್ ಅವರಿಗೆ ಕೊರೋನಾ ಸೋಂಕು ತಗುಲಿದ್ದು ಅದಕ್ಕಾಗಿ ಚಿಕಿತ್ಸೆ ಪಡೆಯುತ್ತಿರುವ ಕಾರಣ ಕಡೆಯ ಬಾರಿಗೆ ಮಗನ ಮುಖವನ್ನೂ ನೋಡಲಾಗದ ಸ್ಥಿತಿಯಲ್ಲಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಪ್ರಸನ್ನ ಕುಮಾರ್ ಅವರ ನಿವಾಸಕ್ಕೆ ಆಗಮಿಸಿ ಸುಹಾಸ್ ಅವರ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಇಡೀ ಕುಟುಂಬ ಸುಹಾಸ್ ನಿಧನದಿಂದ ಶೋಕದ ಕಡಲಲ್ಲಿ ಮುಳುಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com