ಸಿಎಂ ಯಡಿಯೂರಪ್ಪಗೆ ಕರೆ ಮಾಡಿದ ಪ್ರಧಾನಿ ಮೋದಿ: ರಾಜ್ಯ ಪ್ರವಾಹ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದು, ಅಗತ್ಯ ನೆರವು ನೀಡುವ ಭರವಸೆ

ರಾಜ್ಯದಲ್ಲಿ ಸುರಿಯುತ್ತಿರುವ ಬೀಕರ ಮಳೆಯಿಂದ ಹಾನಿಗೊಳಗಾಗಿರುವ ಜನರ ಸಂಕಷ್ಟಕ್ಕೆ ಮಿಡಿದಿರುವ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿ, ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕೆ ಕೇಂದ್ರದಿಂದ ಎಲ್ಲಾ ಸಾಧ್ಯ ನೆರವಿನ ಭರವಸೆ ನೀಡಿದ್ದಾರೆಂದು ತಿಳಿದುಬಂದಿದೆ.
ಕಲಬುರಗಿ ಜಿಲ್ಲೆ
ಕಲಬುರಗಿ ಜಿಲ್ಲೆ

ಮೈಸೂರು: ರಾಜ್ಯದಲ್ಲಿ ಸುರಿಯುತ್ತಿರುವ ಬೀಕರ ಮಳೆಯಿಂದ ಹಾನಿಗೊಳಗಾಗಿರುವ ಜನರ ಸಂಕಷ್ಟಕ್ಕೆ ಮಿಡಿದಿರುವ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿ, ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕೆ ಕೇಂದ್ರದಿಂದ ಎಲ್ಲಾ ಸಾಧ್ಯ ನೆರವಿನ ಭರವಸೆ ನೀಡಿದ್ದಾರೆಂದು ತಿಳಿದುಬಂದಿದೆ.

ಚಾಮುಂಡಿ ಬೆಟ್ಟದ ಮೇಲೆ ದಸರಾ ಉತ್ಸವಕ್ಕೆ ಚಾಲನೆ ದೊರೆತ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಯಡಿಯೂರಪ್ಪ, ಕಳೆದ ರಾತ್ರಿ ಪ್ರಧಾನಿ ಮೋದಿ ತಮ್ಮೊಂದಿಗೆ ಮಾತುಕತೆ ನಡೆಸಿದ್ದು, ಪರಿಸ್ಥಿತಿಯ ಪರಾಮರ್ಶೆ ನಡೆಸಿದ್ದಾರೆ. ಸನ್ನಿವೇಶವನ್ನು ನಿರ್ವಹಿಸಲು ಎಲ್ಲಾ ಅಗತ್ಯ ನೆರವು ನೀಡುವ ಭರವಸೆ ನೀಡಿದ್ದಾರೆ ಎಂದರು.

ಈ ಕುರಿತು ಪ್ರಧಾನಿ ಮೋದಿ ಕೂಡ ಟ್ವೀಟ್ ಮಾಡಿದ್ದು, "ಕರ್ನಾಟಕದ ವಿವಿಧ ಭಾಗಗಳಲ್ಲಿನ ಮಳೆ ಮತ್ತು ಪ್ರವಾಹ ಪರಿಸ್ಥಿತಿಯ ಕುರಿತು ಸಿಎಂ ಬಿಎಸ್‌ವೈ ಅವರೊಂದಿಗೆ ಮಾತನಾಡಿದ್ದೇನೆ. ಕರ್ನಾಟದ ಪ್ರವಾಹದಿಂದ ಪೀಡಿತರಾದ ನಮ್ಮ ಸಹೋದರ ಮತ್ತು ಸಹೋದರಿಯರೊಂದಿಗೆ ನಾವಿದ್ದೇನೆ. ಜಾರಿಯಲ್ಲಿರುವ ರಕ್ಷಣಾ ಕಾರ್ಯಕ್ಕೆ ಕೇಂದ್ರದಿಂದ ಎಲ್ಲಾ ನೆರವು ನೀಡುವುದಾಗಿ ಭರವಸೆ ನೀಡಿದ್ದೇವೆ " ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com