ಗೋವಿಂದ ಕಾರಜೋಳ ಪುತ್ರ ಆರೋಗ್ಯ ಸ್ಥಿತಿ ಗಂಭೀರ: ಡಿಸಿಎಂ ಮನೆಯಲ್ಲಿ 8 ಮಂದಿಗೆ ಕೊರೋನಾ

ನಾನೂ ಸೇರಿದಂತೆ ಕುಟುಂಬದ ಎಂಟು ಮಂದಿ ಕೋವಿಡ್‌ ಬಾಧಿತರಾಗಿದ್ದೇವೆ. ಪುತ್ರ ಡಾ. ಗೋಪಾಲ ಕಾರಜೋಳ 23 ದಿನಗಳಿಂದ ವೆಂಟಿಲೇಟರ್‌ನಲ್ಲಿದ್ದಾನೆ. ಇಂಥ ಸಂಕಷ್ಟದ ಸಂದರ್ಭದಲ್ಲಿ ಒಂದು ಘಟನೆಯಿಂದ ಅಳೆಯಲು ಹೋಗಬೇಡಿ’ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಮನವಿ ಮಾಡಿದ್ದಾರೆ.
ಗೋವಿಂದ ಕಾರಜೋಳ
ಗೋವಿಂದ ಕಾರಜೋಳ

ಬೆಂಗಳೂರು: ನಾನೂ ಸೇರಿದಂತೆ ಕುಟುಂಬದ ಎಂಟು ಮಂದಿ ಕೋವಿಡ್‌ ಬಾಧಿತರಾಗಿದ್ದೇವೆ. ಪುತ್ರ ಡಾ. ಗೋಪಾಲ ಕಾರಜೋಳ 23 ದಿನಗಳಿಂದ ವೆಂಟಿಲೇಟರ್‌ನಲ್ಲಿದ್ದಾನೆ. ಇಂಥ ಸಂಕಷ್ಟದ ಸಂದರ್ಭದಲ್ಲಿ ಒಂದು ಘಟನೆಯಿಂದ ಅಳೆಯಲು ಹೋಗಬೇಡಿ’ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಮನವಿ ಮಾಡಿದ್ದಾರೆ.

ಶಿರಾ ಅಸೆಂಬ್ಲಿ ಕ್ಷೇತ್ರದ ಉಪಚುನಾವಣೆಯ ಪಕ್ಷದ ಅಭ್ಯರ್ಥಿ ಡಾ.ರಾಜೇಶ್ ಗೌಡ ನಾಮಪತ್ರ ಸಲ್ಲಿಕೆಯ ವೇಳೆ ಹಾಜರಾಗಿದ್ದ ಕಾರಜೋಳ ಅವರಿಗೆ, ನೆರೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡದೇ ಇರುವ ಆಪಾದನೆ ಎದುರಾಗಿದೆ. ಈ ಸಂದರ್ಭದಲ್ಲಿ ಕಾರಜೋಳ, ಫೇಸ್ ಬುಕ್ ನಲ್ಲಿ ಪೋಸ್ಟ್ ಒಂದನ್ನು ಹಾಕಿದ್ದಾರೆ.

ನನ್ನ ಪುತ್ರ ಡಾ. ಗೋಪಾಲ ಕಾರಜೋಳ ಕಳೆದ 23 ದಿನಗಳಿಂದ ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ನನ್ನ ಧರ್ಮ ಪತ್ನಿ ಕೂಡಾ ಕೊರೊನಾ ಸೋಂಕಿನಿಂದಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇದೀಗ ಆಸ್ಪತ್ರೆಯಿಂದ ಹಿಂದಿರುಗಿದ್ದಾರೆ. ನಾನೂ ಕೂಡಾ ಕೋವಿಡ್ 19ಕ್ಕೆ ಒಳಗಾಗಿ ಗುಣಮುಖನಾಗಿ ಹಿಂದಿರುಗಿದ್ದೇನೆ.

ನಮ್ಮ ಕುಟುಂಬದಲ್ಲಿ ಒಟ್ಟಾರೆ 8 ಮಂದಿ ಕೊರೊನಾ ಸೋಂಕಿನಿಂದ ಒಳಗಾಗಿದ್ದೇವೆ. ಇದು ವಸ್ತುಸ್ಥಿತಿ. ಇಂತಹ ಗತ್ಯಂತರ ಸಂದರ್ಭದಲ್ಲಿ ನಾನು ಎಲ್ಲೂ ಹೊರಗಡೆ ಹೋಗುವುದು ಸೂಕ್ತವಲ್ಲ. ಅನಿವಾರ್ಯವಿದ್ದ ಪ್ರಸಂಗದಲ್ಲಿ ಮಾತ್ರ ಮುನ್ನೆಚ್ಚರಿಕೆಯಿಂದ ಆಯಾಸವಾಗದಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತೆ ವೈದ್ಯರು ಸಲಹೆ ಇದೆ. ದೂರದ ಪ್ರಯಾಣ
ನಿಷಿದ್ಧ ಎಂಬುದು ವೈದ್ಯರು ಕೊಟ್ಟಿರುವ ಎಚ್ಚರಿಕೆ. ಈ ಎಲ್ಲಾ ಅಂಶಗಳು ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪನವರ ಗಮನದಲ್ಲಿದೆ. ಅವರೂ ಕೂಡಾ ಆರೋಗ್ಯದ ಬಗ್ಗೆ ಕಾಳಜಿವಹಿಸುವಂತೆ ಸೂಚಿಸಿದ್ದಾರೆ.

ಸಾರ್ವಜನಿಕ ಬದುಕಿನಲ್ಲಿರುವವರ ವೈಯಕ್ತಿಕ ಸಂತಸ- ಸಂಕಟಗಳು ಸಾರ್ವಜನಿಕರಿಗೆ ಅಷ್ಟಾಗಿ ತಿಳಿದಿರುವುದಿಲ್ಲ. ಸಂತಸಗಳು ಕೆಲವೊಮ್ಮೆ ಹೊರಗೆ ಬರುತ್ತವೆ. ಆದರೆ ಸಂಕಷ್ಟಗಳು ಯಾವತ್ತಿಗೂ ಅನಾಥ. ಅದನ್ನು ಅನುಭವಿಸಿದರಿಗಷ್ಟೇ ಅದರ ಪ್ರಖರತೆ ಗೊತ್ತು. ಇದ ಪರಿಣಾಮವಾಗಿ ಸಾರ್ವಜನಿಕ ಬದುಕಿನಲ್ಲಿರುವವರ ಹಾಜರಿ ಅಥವಾ ಗೈರುಹಾಜರಿಗಳನ್ನು ಕನ್ನಡಕ ಹಾಕಿ ನೋಡುವ ಪ್ರವೃತ್ತಿ ಹೆಚ್ಚಾಗುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಲಾರದು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com