ಪ್ರವಾಹ ಸಂತ್ರಸ್ತರು, ರೈತರಿಗೆ ಪರಿಹಾರ ಸಿಗಲಿದೆ: ಸಿಎಂ ಯಡಿಯೂರಪ್ಪ ಭರವಸೆ

ಪ್ರವಾಹ ಪೀಡಿತ ಸಂತ್ರಸ್ತರು, ರೈತರಿಗೆ ಸರ್ಕಾರ ಪರಿಹಾರ ನೀಡಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭಾನುವಾರ ಭರವಸೆ ನೀಡಿದ್ದಾರೆ. 
ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ

ಶಿವಮೊಗ್ಗ: ಪ್ರವಾಹ ಪೀಡಿತ ಸಂತ್ರಸ್ತರು, ರೈತರಿಗೆ ಸರ್ಕಾರ ಪರಿಹಾರ ನೀಡಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭಾನುವಾರ ಭರವಸೆ ನೀಡಿದ್ದಾರೆ. 

ಮಲೆನಾಡು ಭಾಗದಲ್ಲಿ ಸಕಾಲದಲ್ಲಿ ಉತ್ತಮ ಮಳೆಯಾಗಿ ಜನ ಉತ್ತಮ ಬೆಳೆಯ ನಿರೀಕ್ಷೆಯಲ್ಲಿದ್ದಾರೆ. ಆದರೆ, ಇದೇ ವೇಳೆಗೆ ಉತ್ತರ ಕರ್ನಾಟಕ ಭಾಗದಲ್ಲಿ ಅತಿವೃಷ್ಟಿಯಿಂದ ಬೆಳೆ ನಾಶವಾಗಿ ಜನ ಸಂಕಷ್ಟಕ್ಕೊಳಗಾಗಿದ್ದಾರೆ. ಈ ಜನರಿಗೆ ನೆರವು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ. 

 ಪ್ರಧಾನಿ ಮೋದಿ ನೆರೆ ಹಾನಿ ಬಗ್ಗೆ ಮಾಹಿತಿ ಪಡೆದಿದ್ದು ಶಕ್ತಿ ಮೀರಿ ಸಂತ್ರಸ್ತರು ಮತ್ತು ಬೆಳೆ ಹಾನಿಗೆ ಪರಿಹಾರ ನೀಡಲಾಗುವುದು. ಮನೆ ನಿರ್ಮಿಸಿಕೊಡಲಾಗುವುದು. ರೈತನ ಬೆಳೆಗ ವೈಜ್ಞಾನಿಕ ಬೆಲೆ ದೊರಕಿಸಿಕೊಡಲಾಗುವುದು. ನೆರೆಯಿಂದ ಸಂಕಷ್ಟಕ್ಕೊಳಗಾದವರಿದೆ ಪರಿಹಾರ ನೀಡುವ ಕೆಲಸ ನಡೆಯುತ್ತಿದೆ. ಜನರ ಜೊತೆ ನಾವಿದ್ದೇವೆಂದು ತಿಳಿಸಿದ್ದಾರೆ. 

ಇದೇ ವೇಳೆ ಉಪಚುನಾವಣೆ ಬಗ್ಗೆ ಮಾತನಾಡಿದ ಅವರು, ಶಿರಾ ಮತ್ತು ರಾಜರಾಜೇಶ್ವರಿ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ನೂರಕ್ಕೆ ನೂರರಷ್ಟು ಗೆಲವು ಸಾಧಿಸಲಿದ್ದಾರೆಂದ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಎರಡೂ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ಭರದಿಂದ ಸಾಗುತ್ತಿದೆ. ಗೆಲುವಿನಲ್ಲಿ ಯಾವುದೇ ಅನುಮಾನವಿಲ್ಲ. ಎರಡೂ ಉಪಚುನಾವಣೆಯಲ್ಲಿ ದೊಡ್ಡ ಅಂತರದಿಂದ ಗೆಲ್ಲುವ ಬಗ್ಗೆ ಯೋಚನೆ ಮಾಡುತ್ತಿದ್ದೇವೆ. ಶಿರಾ ಕ್ಷೇತ್ರ ಕುರಿತು ಆರಂಭದಲ್ಲಿ ನಮಗೆ ಸಂಶಯವಿತ್ತು. ನಮ್ಮ ಅಭ್ಯರ್ಥಿ ಗೆಲವು ಬಗ್ಗೆ ಚರ್ಚೆ ನಡೆದಿತ್ತು. ಆದರೆ, ಮೂರು ದಿನದಿಂದ ವಿಜಯೇಂದ್ರ ಶಿರಾದಲ್ಲೇ ಇದ್ದಾರೆ. ವಿಜಯೇಂದ್ರ ಮುಂದಾಳತ್ವದಲ್ಲಿ ಶಿರಾದಲ್ಲಿ ಚುನಾವಣಾ ಪ್ರಚಾರ ನಡೆಯುತ್ತಿದೆ. ಅಲ್ಲೀಗ ಪರಿಸ್ಥಿತಿ ಬದಲಾಗಿದೆ. ಇಂದಿನ ಸ್ಥಿತಿಯನ್ನು ನೋಡಿದರೆ, ಶಿರಾದಲ್ಲಿಯೂ ನಾವು ಗೆದ್ದೇ ಗೆಲ್ಲುತ್ತೇವೆ. ಆದರೆ, ಅಂತರ ಎಷ್ಟು ಎಂಬುದು ಮಾತ್ರ ಸದ್ಯದ ವಿಚಾರ ಎಂದಿದ್ದಾರೆ. 

ಶೀಘ್ರದಲ್ಲಿಯೇ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಂಡು ಬೃಹತ್ ಕೈಗಾರಿಕೆಗಳು ತಲೆ ಎತ್ತಲಿವೆ. ಸಂಸದ ರಾಘವೇಂದ್ರ ರವಿ ವಿಶೇಷ ಪರಿಶ್ರಮದಿಂದ ತಾಲೂಕಿನ ನೀರಾವರಿ ಯೋಜಡನೆ ಪೂರ್ಣಗೊಂಡು ಕೆರೆಕಟ್ಟೆಗಳು ಭರ್ತಿಯಾಗಲಿವೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com