ಕಲಬುರಗಿ ಪ್ರವಾಹ: 73 ಗ್ರಾಮಗಳ 27,378 ಜನರ ರಕ್ಷಣೆ

ಭೀಮಾ ನದಿಯ ಪ್ರವಾಹದಿಂದ ತತ್ತರಿಸಿರುವ ಜಿಲ್ಲೆಯ 73 ಗ್ರಾಮಗಳ 27278 ಜನರನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಿ.ವಿ.ಜೋತ್ಸ್ನಾ ಅವರು ಸೋಮವಾರ ತಿಳಿಸಿದ್ದಾರೆ.
ಕಾಳಜಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ
ಕಾಳಜಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ

ಕಲಬುರಗಿ: ಭೀಮಾ ನದಿಯ ಪ್ರವಾಹದಿಂದ ತತ್ತರಿಸಿರುವ ಜಿಲ್ಲೆಯ 73 ಗ್ರಾಮಗಳ 27278 ಜನರನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಿ.ವಿ.ಜೋತ್ಸ್ನಾ ಅವರು ಸೋಮವಾರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇದೂವರೆಗೆ 162 ಕಾಳಜಿ ಕೇಂದ್ರಗಳನ್ನು ತೆರೆದು 28637 ಜನರಿಗೆ ಅಲ್ಲಿ ಆಶ್ರಯ ಕಲ್ಪಿಸಿ ಅವರಿಗೆ ಊಟೋಪಚಾರದ ಜೊತೆಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. 
ಸಂತ್ರಸ್ತರ ರಕ್ಷಣೆಗೆ 98 ಸದಸ್ಯರ ಆರ್ಮಿ ಸೇನಾ ಪಡೆ, 57 ಸದಸ್ಯರ 3 ಎನ್.ಡಿ.ಆರ್.ಎಫ್. ತಂಡಗಳು, 44 ಸದಸ್ಯದ ಎಸ್.ಡಿ.ಆರ್.ಎಫ್ ತಂಡ, 80 ಸದಸ್ಯರ ಅಗ್ನಿಶಾಮಕ ದಳದ ತಂಡ ಸೇರಿದಂತೆ ಕಂದಾಯ ಇಲಾಖೆಯ ಸಿಬ್ಬಂದಿಗಳು ಮತ್ತು ಸ್ವಯಂ ಸೇವಕರು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಪ್ರವಾಹಕ್ಕೆ 573 ಜಾನುವಾರಗಳ ಜೀವ ಹಾನಿಯಾಗಿದ್ದು, ಯಾವುದೇ ಮಾನವ ಹಾನಿಯಾಗಿಲ್ಲ. 1266 ಮನೆಗಳು ಭಾಗಶ: ಹಾನಿಗೆ ಒಳಗಾಗಿದ್ದು, 10150 ಮನೆಗಳಿಗೆ ಪ್ರವಾಹದ ನೀರು ನುಗಿದ ಪರಿಣಾಮ ಬಟ್ಟೆ ಮತ್ತು ಪಾತ್ರೆಗಳಿಗೆ ಹಾನಿಯಾಗಿವೆ.

ಭೀಕರ ಪ್ರವಾಹದಿಂದ ಹಾನಿಗೊಳಗಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಸಮೀಕ್ಷೆ ಕಾರ್ಯ ಪ್ರಗತಿಯಲ್ಲಿದೆ. ಸಂತ್ರಸ್ತರ ನೆರವಿಗೆ ಆ್ಯಂಬುಲೆನ್ಸ್ ಸೇವೆ ಸಹ ಸಿದ್ಧವಿಡಲಾಗಿದೆ ಎಂದು ಜೋತ್ಸ್ನಾ ಅವರು ಹೇಳಿದ್ದಾರೆ.

ಕಲಬುರಗಿ ಜಿಲ್ಲಾಧಿಕಾರಿ ವಿ. ವಿ. ಜೋತ್ಸ್ನಾ ಅವರು ಇಂದು ಅಫಜಲಪೂರ ತಾಲೂಕಿನ ಬಂದರವಾಡ, ಗಾಣಗಾಪೂರ, ಕರಜಗಿ ಗ್ರಾಮಗಳಲ್ಲಿನ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಬಳ್ಳಾರಿ ಗೃಹರಕ್ಷಕದಳ ತಂಡ ನಿಯೋಜನೆ
ಕಲಬುರಗಿ ಜಿಲ್ಲೆಯ ಭೀಮಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಪರಿಣಾಮ ನದಿಯ ದಂಡೆಯ ಗ್ರಾಮಗಳಲ್ಲಿ ಪ್ರವಾಹ ಉಂಟಾಗಿರುವುದರಿಂದ ಅಲ್ಲಿನ ಜನರನ್ನು ಹಾಗೂ ಜಾನುವಾರಗಳ ರಕ್ಷಣೆಗಾಗಿ ಬಳ್ಳಾರಿ ಜಿಲ್ಲೆಯ ಗೃಹರಕ್ಷಕದಳದ ನುರಿತ ಈಜುಗಾರರ ರಕ್ಷಣಾ ತಂಡವನ್ನು ನಿಯೋಜಿಸಿ ಕಳುಹಿಸಿಕೊಡಲಾಗಿದೆ ಎಂದು ಗೃಹರಕ್ಷಕದಳ ಘಟಕದ ಘಟಕಾಧಿಕಾರಿಗಳು ತಿಳಿಸಿದ್ದಾರೆ.

ಬಳ್ಳಾರಿ ಗೃಹರಕ್ಷಕ ರಕ್ಷಣಾ ತಂಡದ ಡಿ. ಉಮೇಶ್ ಮೆಟಲ್ ಸಂಖ್ಯೆ 57, ಬಸವರಾಜ ಮೆಟಲ್ ಸಂಖ್ಯೆ 94, ಕೆ.ಎನ್.ಮಹಾಂತೇಶ ಮೆಟಲ್ ಸಂಖ್ಯೆ 322, ಕೆ. ಆನಂದ್ ಮೆಟಲ್ ಸಂಖ್ಯೆ 318 ಮತ್ತು ಕುಡುತಿನಿ ಗೃಹರಕ್ಷಕದಳ ಘಟಕದ ಕೆ.ಸುರೇಶ್ ಮೆಟಲ್ ಸಂಖ್ಯೆ 2002 ಸದಸ್ಯರನ್ನು ಕಾರ್ಯಾಚರಣೆಯಲ್ಲಿ ಭಾಗವಹಿಸಿ ಸಂತ್ರಸ್ತರನ್ನು ರಕ್ಷಿಸುತ್ತಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com