ಗಲಭೆಕೋರರೊಂದಿಗೆ ಸಂಪರ್ಕದಲ್ಲಿದ್ದ ಮಾಜಿ ಮೇಯರ್ ಸಂಪತ್ ರಾಜ್!

ಅವಹೇಳನಕಾರಿ ಪೋಸ್ಟ್ ನಿಂದಾಗಿ ನಗರದ ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಗಲಭೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಇದೀಗ ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲಭೆಕೋರರೊಂದಿಗೆ ಸಂಪತ್ ರಾಜ್ ಸಂಪರ್ಕದಲ್ಲಿರು ಎನ್ನುವ ಸ್ಫೋಟಕ ಮಾಹಿತಿ ತನಿಖಾಧಿಕಾರಿಗಳಿಗೆ ಲಭ್ಯವಾಗಿದೆ ಎನ್ನಲಾಗಿದೆ.
ಸಂಪತ್ ರಾಜ್
ಸಂಪತ್ ರಾಜ್

ಬೆಂಗಳೂರು: ಅವಹೇಳನಕಾರಿ ಪೋಸ್ಟ್ ನಿಂದಾಗಿ ನಗರದ ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಗಲಭೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಇದೀಗ ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲಭೆಕೋರರೊಂದಿಗೆ ಸಂಪತ್ ರಾಜ್ ಸಂಪರ್ಕದಲ್ಲಿರು ಎನ್ನುವ ಸ್ಫೋಟಕ ಮಾಹಿತಿ ತನಿಖಾಧಿಕಾರಿಗಳಿಗೆ ಲಭ್ಯವಾಗಿದೆ ಎನ್ನಲಾಗಿದೆ.

ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ ಮೇಲೆ ದಾಳಿಯಾಗುವುದಕ್ಕಿಂತ ಮುಂಚೆ ಏನೆಲ್ಲ ನಡೆದಿತ್ತು ಎಂಬ ಕುರಿತು ಮಾಹಿತಿ ಕಲೆ ಹಾಕಿದ್ದಾರೆ. ಆರೋಪಿ ಮಾಜಿ ಮೇಯರ್ ಸಂಪತ್‌ರಾಜ್ ಅವರ ದೂರವಾಣಿ ಕರೆಗಳ ಬಗ್ಗೆ ಸಂಪೂರ್ಣ ವಿವರವನ್ನು ತನಿಖಾಧಿಕಾರಿಗಳು ಕಲೆ ಹಾಕಿದ್ದಾರೆ.

ಸಂಪತ್‌ ರಾಜ್ ಅವರು ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳೊಂದಿಗೆ ಸಂಪರ್ಕದಲ್ಲಿದ್ದರು ಎಂಬ ಸುಳಿವೊಂದು ತನಿಖಾಧಿಕಾರಿಗಳಿಗೆ ಲಭ್ಯವಾಗಿದೆ ಎನ್ನಲಾಗಿದೆ.

ಆ.11ರ ಸಂಜೆ 6ರಿಂದ ತಡರಾತ್ರಿ 2 ಗಂಟೆವರೆಗೂ ಸಂಪತ್ ರಾಜ್, ಪ್ರಕರಣದಲ್ಲಿ ಬಂಧಿತ ಆರೋಪಿಗಳಾದ ಸಜ್ಜದ್ ಖಾನ್, ಮುಜಾಹಿದ್ ಪಾಷಾ, ಯಾಸೀನ್ ಜಾಕೀರ್, ವಾಜಿದ್ ಪಾಷಾ, ಅರುಣ್ ಅವರೊಂದಿಗೆ ದೂರವಾಣಿ ಸಂಪರ್ಕದಲ್ಲಿದ್ದರು ಎಂಬುದು ಟವರ್ ಲೋಕೇಶನ್ ಮೂಲಕ ಖಾತರಿಯಾಗಿದೆ.

ಈಗಾಗಲೇ ದೇವರ ಜೀವನಹಳ್ಳಿ(ಡಿ.ಜೆ.ಹಳ್ಳಿ) ಠಾಣೆ ವ್ಯಾಪ್ತಿಯಲ್ಲಿರುವ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಆ. 11ರಂದು ರಾತ್ರಿ ಬೆಂಕಿ ಹಚ್ಚಿದ್ದ ಪ್ರಕರಣದ ತನಿಖೆ ಮುಕ್ತಾಯ ಗೊಳಿಸಿರುವ ಸಿಸಿಬಿ ಪೊಲೀಸರು, ನ್ಯಾಯಾಲಯಕ್ಕೆ 400 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರನ್ನು ರಾಜಕೀಯವಾಗಿ ಮುಗಿಸಲು ಸಂಪತ್ ರಾಜ್, ಜಾಕೀರ್ ಹಾಗೂ ಇತರರರು ಸಂಚು ರೂಪಿಸುತ್ತಿದ್ದರು. ಅದೇ ಸಮಯದಲ್ಲೇ ಶ್ರೀನಿವಾಸಮೂರ್ತಿ ಅವರ ಸಂಬಂಧಿ ನವೀನ್, ಇಸ್ಲಾಂ ಧರ್ಮಗುರು ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ. ಅದೇ ವಿಷಯವನ್ನೇ ನೆಪಮಾಡಿಕೊಂಡ ಮತೀಯವಾದಿಗಳು ಹಾಗೂ ರಾಜಕೀಯ ವಿರೋಧಿಗಳು, ತಮ್ಮ ರಾಜಕೀಯ ಲಾಭಕ್ಕಾಗಿ ಮುಸ್ಲಿಂ ಸಮುದಾಯದವರನ್ನು ಪ್ರಚೋದಿಸಿ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಆ. 11ರಂದು ರಾತ್ರಿ ಬೆಂಕಿ ಹಚ್ಚುವಂತೆ ಮಾಡಿದ್ದರು ಎಂಬ ಸಂಗತಿಯನ್ನು ದೋಷಾರೋಪಣ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com