ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ನ್ಯಾಯಾಧೀಶರಿಗೆ ಬಾಂಬ್ ಬೆದರಿಕೆ, ನಾಲ್ವರು ಪೊಲೀಸ್ ವಶಕ್ಕೆ

ಸಿಟಿ ಸಿವಿಲ್ ಕೋರ್ಟ್ ನ್ಯಾಯಾಧೀಶರಿಗೆ ಬಾಂಬ್ ಬೆದರಿಕೆಯೊಡ್ಡಿ ಪತ್ರ ಬರೆದಿದ್ದ ಆರೋಪ ಮೇಲೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು: ಸಿಟಿ ಸಿವಿಲ್ ಕೋರ್ಟ್ ನ್ಯಾಯಾಧೀಶರಿಗೆ ಬಾಂಬ್ ಬೆದರಿಕೆಯೊಡ್ಡಿ ಪತ್ರ ಬರೆದಿದ್ದ ಆರೋಪ ಮೇಲೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತುಮಕೂರು ಮೂಲದ ರಾಜಶೇಖರ್, ವೇದಾಂತ್, ಶಿವಪ್ರಕಾಶ್, ರಮೇಶ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತುಮಕೂರಿನಲ್ಲಿ ಶಂಕಿತರನ್ನು ವಶಕ್ಕೆ ಪಡೆಯಲಾಗಿದ್ದು, ಬೆಂಗಳೂರಿಗೆ ಕರೆತಂದು ಅವರನ್ನು ಸಂಪೂರ್ಣವಾಗಿ ವಿಚಾರಣೆ ನಡೆಸಿದ ಬಳಿಕವೇ ಮುಂದಿನ ಕ್ರಮ‌ ಜರುಗಿಸಲಾಗುವುದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಈ ನಾಲ್ವರು ಸಂಬಂಧಿಕರಾಗಿದ್ದು, ಆಸ್ತಿ ಹಂಚಿಕೆ ಸಂಬಂಧ ಮನಸ್ತಾಪವಿತ್ತು. ಅದೇ ಕಾರಣಕ್ಕೆ ರಾಜಶೇಖರ್ ಎಂಬಾತ, ಶಿವಪ್ರಕಾಶ್, ವೇದಾಂತ್ ಹಾಗೂ ರಮೇಶ್ ಹೆಸರಿನಲ್ಲಿ ಪತ್ರ ಬರೆದಿದ್ದ. ಅವರನ್ನು ಜೈಲಿಗೆ ಕಳುಹಿಸುವುದು ಅವನ ಉದ್ದೇಶವಾಗಿತ್ತು ಎಂದು ತಿಳಿದು ಬಂದಿದೆ. ಆದರೂ ಎಲ್ಲರನ್ನೂ ವಿಚಾರಣೆಗೆ ಒಳಪಡಿಸಬೇಕು. ಅವಾಗಲೇ ನಿಜಾಂಶ ತಿಳಿಯಲಿದೆ ಎಂದು ಪೊಲೀಸರು ಹೇಳಿದ್ದಾರೆ.

ಹೀರೋಯಿನ್‍ಗಳಿಗೆ ಜಾಮೀನು ನೀಡಬೇಕು. ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವವರು ಅಮಾಯಕರು. ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು. ಇಲ್ಲದಿದ್ದರೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್, ಸಿಸಿಬಿ ಮುಖ್ಯಸ್ಥ ಸಂದೀಪ್‍ಪಾಟೀಲ್, ಎನ್ ಡಿಪಿಎಸ್ ವಿಶೇಷ ನ್ಯಾಯಾಧೀಶ ಸೀನಪ್ಪ ಅವರ ಕಾರು ಸ್ಫೋಟಿಸಿ ಹತ್ಯೆ ಮಾಡುವುದಾಗಿ ಸಿಟಿ ಸಿವಿಲ್ ಕೋರ್ಟ್‍ಗೆ ಜೀವಂತ ಡಿಟೋನೇಟರ್‍ನೊಂದಿಗೆ ಆರೋಪಿಗಳು ಪತ್ರ ರವಾನಿಸಿದ್ದರು.

Related Stories

No stories found.

Advertisement

X
Kannada Prabha
www.kannadaprabha.com