ಸ್ಯಾಂಡಲ್ ವುಡ್ ನಟಿಯರ ಡ್ರಗ್ ಕೇಸು ವಿಚಾರಣೆ ಮಾಡುವ ನ್ಯಾಯಾಧೀಶರಿಗೇ ಬಂತು ಬೆದರಿಕೆ ಪತ್ರ!
ಡ್ರಗ್ ಕೇಸಿನಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಜೈಲಿನಲ್ಲಿರುವ ಇಬ್ಬರು ಸ್ಯಾಂಡಲ್ ವುಡ್ ನಟಿಯರನ್ನು ಕೂಡಲೇ ಬಿಡುಗಡೆ ಮಾಡಿ, ಇಲ್ಲದಿದ್ದರೆ ಬಾಂಬ್ ಸ್ಫೋಟಿಸುತ್ತೇವೆ ಎಂಬ ಬೆದರಿಕೆ ಪತ್ರ ಬಂದು ನಿನ್ನೆ ಅಪರಾಹ್ನ ಕೆಲ ಕಾಲ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು.
Published: 20th October 2020 07:44 AM | Last Updated: 20th October 2020 07:44 AM | A+A A-

ರಾಗಿಣಿ ದ್ವಿವೇದಿ, ಸಂಜನಾ ಗಲ್ರಾಣಿ
ಬೆಂಗಳೂರು: ಡ್ರಗ್ ಕೇಸಿನಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಜೈಲಿನಲ್ಲಿರುವ ಇಬ್ಬರು ಸ್ಯಾಂಡಲ್ ವುಡ್ ನಟಿಯರನ್ನು ಕೂಡಲೇ ಬಿಡುಗಡೆ ಮಾಡಿ, ಇಲ್ಲದಿದ್ದರೆ ಬಾಂಬ್ ಸ್ಫೋಟಿಸುತ್ತೇವೆ ಎಂಬ ಬೆದರಿಕೆ ಪತ್ರ ಬಂದು ನಿನ್ನೆ ಅಪರಾಹ್ನ ಕೆಲ ಕಾಲ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು.
ಡಿಟೊನೇಟರ್ ಮಾದರಿಯ ವಸ್ತುವನ್ನು ಪತ್ರದೊಳಗಿಟ್ಟು ಡ್ರಗ್ ಮತ್ತು ನಾರ್ಕೊಟಿಕ್ ಕೇಸುಗಳಿಗೆ ಸಂಬಂಧಪಟ್ಟ ವಿಶೇಷ ಕೋರ್ಟ್ ನ ನ್ಯಾಯಾಧೀಶರಿಗೆ ಈ ಬೆದರಿಕೆ ಪತ್ರವನ್ನು ಕಳುಹಿಸಲಾಗಿದೆ. ಅದರಲ್ಲಿ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾಣಿಯವರನ್ನು, ಮತ್ತು ಡಿ ಜೆ ಹಳ್ಳಿ ದಂಧೆ ಗಲಭೆಕೋರರನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಇಲ್ಲದಿದ್ದರೆ ಬಾಂಬ್ ಸ್ಫೋಟಿಸಿ ನಾಶ ಮಾಡಲಾಗುವುದು ಎಂದು ಬೆದರಿಕೆ ಹಾಕಲಾಗಿದೆ.
ನ್ಯಾಯಾಧೀಶ ಜಿ ಎಂ ಶೀನಪ್ಪ ಅವರ ವಿಳಾಸಕ್ಕೆ ಅಂಚೆ ಮೂಲಕ ಪತ್ರ ಬಂದಿದ್ದು, ಅದನ್ನು ಅವರು ತೆರೆದು ನೋಡಿದಾಗ, ಸಣ್ಣ ಡಿಟೊನೇಟರ್ ರೀತಿಯ ವಸ್ತುವಿನೊಂದಿಗೆ ಬೆದರಿಕೆ ಪತ್ರವನ್ನು ಕೂಡ ಬರೆಯಲಾಗಿತ್ತು. ಕೂಡಲೇ ನ್ಯಾಯಮೂರ್ತಿಗಳು ತಮ್ಮ ಸಿಬ್ಬಂದಿಗೆ ಹೇಳಿ ಪೊಲೀಸರಿಗೆ ಕರೆ ಮಾಡುವಂತೆ ಸೂಚಿಸಿದರು. ತಕ್ಷಣವೇ ಪೊಲೀಸ್ ಶ್ವಾನ ಮತ್ತು ಬಾಂಬ್ ಪತ್ತೆ ದಳ ಬಂದು ಶೋಧ ನಡೆಸಿತು. ಪೊಲೀಸರು ವಸ್ತುವನ್ನು ಪರಿಶೀಲಿಸಿದ್ದಾರೆ.
ಸ್ಫೋಟಕಗಳನ್ನು ಬಳಸಿ ನ್ಯಾಯಾಧೀಶರ ಕಾರನ್ನು ಸ್ಫೋಟಿಸಿ ಬೇಡಿಕೆ ಈಡೇರಿಸದಿದ್ದರೆ ಕೊಲ್ಲುವುದಾಗಿ ಪತ್ರದಲ್ಲಿ ಬೆದರಿಕೆ ಹಾಕಲಾಗಿದೆ. ಪೊಲೀಸ್ ಆಯುಕ್ತ ಕಮಲ್ ಪಂತ್ ಮತ್ತು ಇತರ ಹಿರಿಯ ಅಧಿಕಾರಿಗಳು ಇದೇ ರೀತಿಯ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.
ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಮಲ್ ಪಂತ್ ಮತ್ತು ಇತರ ಹಿರಿಯ ಅಧಿಕಾರಿಗಳಿಗೆ ಇದೇ ರೀತಿಯ ಪತ್ರಗಳನ್ನು ಕಳುಹಿಸಲಾಗಿದೆ ಎಂದು ಹೇಳಲಾಗಿದ್ದರೂ ಪೊಲೀಸರು ಇದನ್ನು ಖಚಿತಪಡಿಸಿಲ್ಲ. "ನಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಮತ್ತು ಇದರ ಹಿಂದೆ ಯಾರು ಇದ್ದಾರೆ ಎಂಬುದನ್ನು ಪತ್ತೆ ಹಚ್ಚಿ ಬಂಧಿಸಲಾಗುವುದು. ಶೀಘ್ರದಲ್ಲೇ ದುಷ್ಕರ್ಮಿಯನ್ನು ಹಿಡಿಯಲು ನಾವು ವಿಶೇಷ ತಂಡಗಳನ್ನು ರಚಿಸಿದ್ದೇವೆ ಎಂದು ಸಿಸಿಬಿಯ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.