ಭೀಮೆಗೆ 8 ಲಕ್ಷ ಕ್ಯುಸೆಕ್ ನೀರು: ಮಹಾರಾಷ್ಟ್ರದಿಂದ ತಪ್ಪು ಮಾಹಿತಿ

ಭೀಮಾ ನದಿಗೆ 8 ಲಕ್ಷ ಕ್ಯೂಸೆಕ್ ನೀರು ಬಿಡುತ್ತಿರುವ ಬಗ್ಗೆ ಮಹಾರಾಷ್ಟ್ರ ರಾಜ್ಯ ತಪ್ಪು ಮಾಹಿತಿ ನೀಡಿದ್ದು, ಅಲ್ಲಿನ ಸರ್ಕಾರ ಹಾಗೂ ಸಚಿವರೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿಯವರು ಹೇಳಿದ್ದಾರೆ. 
ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ
ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ

ರಾಯಚೂರು: ಭೀಮಾ ನದಿಗೆ 8 ಲಕ್ಷ ಕ್ಯೂಸೆಕ್ ನೀರು ಬಿಡುತ್ತಿರುವ ಬಗ್ಗೆ ಮಹಾರಾಷ್ಟ್ರ ರಾಜ್ಯ ತಪ್ಪು ಮಾಹಿತಿ ನೀಡಿದ್ದು, ಅಲ್ಲಿನ ಸರ್ಕಾರ ಹಾಗೂ ಸಚಿವರೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿಯವರು ಹೇಳಿದ್ದಾರೆ. 

ತಾಲೂಕಿನ ಕೃಷ್ಣ ಮತ್ತು ಭೀಮಾ ನದಿಯ ಸಂಗಮವಾಗುವ ಗುರ್ಜಾಪುರ ಬ್ರಿಜ್ಡ್ ಕಂ ಬ್ಯಾರೇಜ್"ಗೆ ಭೇಟಿ ನೀಡಿ ಪರಿಶೀಲಿಸಿದ ಸಚಿವರು, ಎರಡು ಮೂರು ದಿನಗಳಿಂದ ಭೀಮಾ ನದಿಗೆ 8 ಲಕ್ಷ ಕ್ಯೂಸೆಕ್ ನೀರು ಹರಿಸಲಾಗುತ್ತಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಮಹಾರಾಷ್ಟ್ರದ ಅಧಿಕಾರಿಗಳು ನೀಡಿರುವ ಮಾಹಿತಿ ತಪ್ಪಾಗಿರಬಹುದು. ಈ ಬಗ್ಗೆ ಅಧಿಕಾರಿಗಳ ಜೊತೆ ಮಾತನಾಡುವೆ ಎಂದಿದ್ದಾರೆ.

ಕೃಷ್ಣ ಮತ್ತು ಭೀಮಾ ನದಿಯ ಸಂಗಮವಾಗುವ ಗುರ್ಜಾಪುರ ಗ್ರಾಮ ಮಳೆಗಾಲ ಹಾಗೂ ನೆರೆಯ ಮಹಾರಾಷ್ಟ್ರದಿಂದ ಲಕ್ಷಾಂತರ ಕ್ಯೂಸೆಕ್ಸ್ ನೀರು ಹರಿಸಿದ ಸಂದರ್ಭದಲ್ಲಿ ಪ್ರವಾಹದ ಸ್ಥಿತಿ ಏರ್ಪಡುತ್ತದೆ, ಗ್ರಾಮಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಗ್ರಾಮ ಸಭೆ ನಡೆಸಿ, ಗ್ರಾಮಸ್ಥರ ಅಭಿಪ್ರಾಯ ಸಂಗ್ರಹಿಸಿ ವರದಿ ನೀಡುವಂತೆ ಸಹಾಯಕ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. 

ಗುರ್ಜಾಪೂರು ಗ್ರಾಮವನ್ನು ನದಿ ಪಾತ್ರದಿಂದ ಎತ್ತರದ ಪ್ರದೇಶಕ್ಕೆ ಸ್ಥಳಾಂತರಿಸುವ ಬಗ್ಗೆ ಗ್ರಾಮಸ್ಥರದಲ್ಲಿ ಭಿನ್ನಾಭಿಪ್ರಾಯ ಇದೆ, ಆದ ಕಾರಣ ಗ್ರಾಮದಲ್ಲಿ ಸಹಾಯಕ ಆಯುಕ್ತರ ನೇತೃತ್ವದಲ್ಲಿ ಗ್ರಾಮ ಸಭೆ ನಡೆಸಿ, ಶಾಶ್ವತ ಪರಿಹಾರವನ್ನು ಕಂಡುಕೊಳ್ಳಬೇಕಿದೆ, ಮಳೆ, ಪ್ರವಾಹದಿಂದ ಪ್ರತಿ ಭಾರಿ ಗುರ್ಜಾಪೂರು ಸೇರಿ ನಾಲ್ಕು ಗ್ರಾಮಗಳು ಪ್ರವಾಹ ಎದುರಿಸಬೇಕಾಗಿದೆ. ಅರಿಶಿಣಿಗೆ, ಡಿ.ಡೋಂಗರಾಪೂರು, ಅತ್ಕೂರು, ಬೂರ್ದಿಪಾಡು ಗ್ರಾಮದ ನದಿ ತೀರದ ಜನರು ತೀವ್ರ ಸಂಕಷ್ಟ ಎದುರಿಸಬೇಕಾಗಿದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com