ಪ್ರವಾಹಪೀಡಿತ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಕ್ರಮ: ಸಚಿವ ಡಾ. ಸುಧಾಕರ್‌

ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಇರುವುದರಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳಲು ಜಿಲ್ಲಾಡಳಿತಗಳಿಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದ್ದಾರೆ.
ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌
ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌

ಬೆಂಗಳೂರು: ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಇರುವುದರಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳಲು ಜಿಲ್ಲಾಡಳಿತಗಳಿಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದ್ದಾರೆ.

ಪ್ರವಾಹಪೀಡಿತ ಗ್ರಾಮಗಳು, ಸ್ಥಳಾಂತರಗೊಂಡಿರುವ ಗ್ರಾಮಗಳು, ಸಂತ್ರಸ್ತರಿಗೆ ತೆರಿದಿರುವ ಕಾಳಜಿ ಕೇಂದ್ರಗಳ ಬಳಿ ಕೈಗೊಳ್ಳಬೇಕಿರುವ ಕ್ರಮಗಳು ಹಾಗೂ ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಕೈಗೊಳ್ಳಬೇಕಿರುವ ಸಿದ್ಧತೆಗಳ ಬಗ್ಗೆ ಬಾಗಲಕೋಟ, ವಿಜಯಪುರ, ಕಲಬುರ್ಗಿ, ಯಾದಗಿರಿ, ಕೊಪ್ಪಳ ಮತ್ತು ಬೆಳಗಾವಿ ಜಿಲ್ಲೆಗಳ ಜಿಲ್ಲಾಡಳಿತಗಳ ಜತೆ ಸಚಿವರು ಸೋಮವಾರ ವಿಡಿಯೋ ಸಂವಾದ ನಡೆಸಿ ಪರಿಸ್ಥಿತಿಯ ಪರಾಮಾರ್ಶೆ ನಡೆಸಿದರು.

ಕಲಬುರ್ಗಿ ಜಿಲ್ಲೆಯಲ್ಲಿ ಅತಿ ಹೆಚ್ಚು ಹಾನಿಯಾಗಿದೆ. ಒಟ್ಟು 155 ಗ್ರಾಮಗಳು ಜಲಾವೃತಗೊಂಡಿದ್ದು 55 ಗ್ರಾಮಗಳ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಜಿಲ್ಲೆಯಾದ್ಯಂತ ಹಾನಿಗೊಳಗಾದ ಗ್ರಾಮಗಳ 23,250 ಮಂದಿಯನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ವಿಜಯಪುರ ಜಿಲ್ಲೆಯಲ್ಲಿ 27 ಗ್ರಾಮಗಳಲ್ಲಿ ಪ್ರವಾಹದಿಂದ ಹಾನಿಯಾಗಿದೆ. ದುರದೃಷ್ಟವಶಾತ್‌ ಒಂದು ಸಾವಾಗಿದೆ. ಈ ಜಿಲ್ಲೆಯಲ್ಲಿ 1861 ಜನರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಯಾವುದೇ ಕಾಳಜಿ ಕೇಂದ್ರಗಳನ್ನು ತೆರೆಯುವ ಪರಿಸ್ಥಿತಿ ಉದ್ಭವಿಸಿಲ್ಲ ಎಂದು ಸಚಿವರು ವಿವರಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com