ಕರ್ನಾಟಕದಲ್ಲಿ ಚೇತರಿಕೆ ಪ್ರಮಾಣ ಗಣನೀಯ ಏರಿಕೆ: ಇಂದು 9,289 ಮಂದಿ ಡಿಸ್ಚಾರ್ಜ್, 5,872 ಮಂದಿಗೆ ಪಾಸಿಟಿವ್!
ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಕೊಂಚ ಕಡಿಮೆಯಾಗುತ್ತಿದ್ದು ಇಂದು 5,872 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 7,82,773ಕ್ಕೆ ಏರಿಕೆಯಾಗಿದೆ.
Published: 21st October 2020 08:30 PM | Last Updated: 21st October 2020 08:32 PM | A+A A-

ಸಂಗ್ರಹ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಕೊಂಚ ಕಡಿಮೆಯಾಗುತ್ತಿದ್ದು ಇಂದು 5,872 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 7,82,773ಕ್ಕೆ ಏರಿಕೆಯಾಗಿದೆ.
ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 88 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 10,696ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು 9,289 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 6,71,618ಕ್ಕೆ ಏರಿಕೆಯಾಗಿದೆ. 1,00,440 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಪೈಕಿ 947 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2,717 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 3,15,559ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಇಂದು 36 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.
Today's Media Bulletin 21/10/2020.
— K'taka Health Dept (@DHFWKA) October 21, 2020
Please click on the link below to view bulletin.@PMOIndia @narendramodi @CMofKarnataka @UNICEFIndia @UNDP_India @WHOSEARO @MoHFW_INDIA @MVenkaiahNaidu @drharshvardhan @BSYBJP @DVSadanandGowda @PCMohanMP @Tejasvi_Surya https://t.co/NyN3eg8d1G pic.twitter.com/GtHkwOO8rF