ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸುವಂತೆ ಶಿಕ್ಷಣ ಇಲಾಖೆಗೆ ಸಿಎಂ ಯಡಿಯೂರಪ್ಪ ಸೂಚನೆ

ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬುಧವಾರ ಆದೇಶಿಸಿದ್ದಾರೆ.

Published: 21st October 2020 08:01 PM  |   Last Updated: 21st October 2020 08:01 PM   |  A+A-


Yediyurappa

ಯಡಿಯೂರಪ್ಪ

Posted By : Lingaraj Badiger
Source : UNI

ಬೆಂಗಳೂರು: ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬುಧವಾರ ಆದೇಶಿಸಿದ್ದಾರೆ.

ಒಂದು ವಾರದ ಒಳಗಾಗಿ ಶಿಕ್ಷಣ ಇಲಾಖೆಯ ವರ್ಗಾವಣೆ ವೇಳಾಪಟ್ಟಿಯನ್ನು ಪ್ರಕಟಿಸಿ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಬೇಕೆಂದು ಸಿಎಂ ಸೂಚಿಸಿದ್ದಾರೆ.

ರಾಜ್ಯ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರಿಗೆ ವರ್ಗಾವಣೆ ಸೌಲಭ್ಯವಿಲ್ಲದೆ ಆತಂಕಕ್ಕೆ ಒಳಗಾಗಿದ್ದಾರೆ. ಅವರ ಆತಂಕವನ್ನು ದೂರಮಾಡಲು ಕೂಡಲೇ ಕ್ರಮಕೈಗೊಳ್ಳುವಂತೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸಿಎಂ ಸೂಚನೆ ನೀಡಿದ್ದಾರೆ.

ವರ್ಗಾವಣೆ ಮಾರ್ಗಸೂಚಿ ಹೊರಡಿಸಿ 5 ತಿಂಗಳು ಕಳೆದಿದ್ದರೂ, ವರ್ಗಾವಣೆ ವೇಳಾಪಟ್ಟಿ ಹೊರಡಿಸಿಲ್ಲ. ಬೇರೆ ಬೇರೆ ಇಲಾಖೆಗಳಲ್ಲಿ ವರ್ಗಾವಣೆ ಪ್ರಕ್ರಿಯೆಗಳು ಕಾಲಕಾಲಕ್ಕೆ ನಡೆಯುತ್ತಿವೆ. ಆದರೆ, ಶಿಕ್ಷಣ ಇಲಾಖೆಯಲ್ಲಿ ವರ್ಗಾವಣೆ ಪ್ರಕ್ರಿಯೆ ಆಗದಿರುವ ಬಗ್ಗೆ ಅನೇಕ ಮನವಿಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಕೂಡಲೇ ವರ್ಗಾವಣೆ ಪ್ರಕ್ರಿಯೆಗೆ ಮುಂದಾಗಬೇಕು ಎಂದು ಹೇಳಿದ್ದಾರೆ.

Stay up to date on all the latest ರಾಜ್ಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp