ಸಂತ್ರಸ್ತರಿಗೆ ಯಾವುದೇ ರೀತಿಯ ಸಮಸ್ಯೆಗಳಾಗದಂತೆ ಸೌಕರ್ಯ ಒದಗಿಸಲಾಗುತ್ತದೆ: ಸಿಎಂ ಯಡಿಯೂರಪ್ಪ

ಪ್ರವಾಹದಿಂದ ನಲುಗಿರುವ ಸಂತ್ರಸ್ತರಿಗೆ ಯಾವುದೇ ರೀತಿಯ ಸಮಸ್ಯೆಗಳಾಗದಂತೆ ಸೌಕರ್ಯಗಳನ್ನು ಒದಗಿಸಲಾಗುತ್ತದೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತೇನೆಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ. 
ವೈಮಾನಿಕ ಸಮೀಕ್ಷೆ ನಡೆಸುತ್ತಿರುವ ಸಿಎಂ ಯಡಿಯೂರಪ್ಪ
ವೈಮಾನಿಕ ಸಮೀಕ್ಷೆ ನಡೆಸುತ್ತಿರುವ ಸಿಎಂ ಯಡಿಯೂರಪ್ಪ

ಬೆಂಗಳೂರು: ಪ್ರವಾಹದಿಂದ ನಲುಗಿರುವ ಸಂತ್ರಸ್ತರಿಗೆ ಯಾವುದೇ ರೀತಿಯ ಸಮಸ್ಯೆಗಳಾಗದಂತೆ ಸೌಕರ್ಯಗಳನ್ನು ಒದಗಿಸಲಾಗುತ್ತದೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತೇನೆಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ. 

ನೆರೆಯಿಂದ ತತ್ತರಿಸಿರುವ ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವೈಮಾನಿಕ ಸಮೀಕ್ಷೆಯನ್ನು ಆರಂಭಿಸಿದ್ದು, ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದಾರೆ. 

ಬೆಂಗಳೂರಿನಿಂದ ನೆರೆ ಪೀಡಿತ ಪ್ರದೇಶಗಳಿಗೆ ತೆರಳುವುದಕ್ಕೂ ಮುನ್ನ ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಹ ಪೀಡಿತ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿಂದು ವೈಮಾನಿಕ ಸಮೀಕ್ಷೆ ಕೈಗೊಳ್ಳುತ್ತಿದ್ದೇನೆ. ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಇತರೆ ಅಧಿಕಾರಿಗಳೂ ಕೂಡ ಸಮೀಕ್ಷೆಯಲ್ಲಿ ಭಾಗಿಯಾಗಲಿದ್ದಾರೆಂದು ತಿಳಿಸಿದ್ದಾರೆ. 

ಪ್ರವಾಹದಿಂದ ನಲುಗಿರುವ ಸಂತ್ರಸ್ತರಿಗೆ ಯಾವುದೇ ರೀತಿಯ ಸಮಸ್ಯೆಗಳಾಗದಂತೆ ಸೌಕರ್ಯಗಳನ್ನು ಒದಗಿಸಲಾಗುತ್ತದೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತೇನೆ. ವೈಮಾನಿಕ ಸಮೀಕ್ಷೆ ಪೂರ್ಣಗೊಂಡ ಬಳಿಕ ಸಂತ್ರಸ್ತರಿಗೆ ಇನ್ನೂ ಹೆಚ್ಚಿನ ನೆರವು ಒದಗಿಸಲು ತೀರ್ಮಾನ ಕೈಗೊಳ್ಳುತ್ತೇನೆಂದಿದ್ದಾರೆ. 

ಸಮೀಕ್ಷೆಯ ಬಳಿಕ ಕೇಂದ್ರಕ್ಕೆ ವರದಿ ಸಲ್ಲಿಸಲಾಗುವುದು. ಬಳಿಕ ಕೇಂದ್ರ ತಂಡ ಬರಬಹುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಇಂದು ಕಲಬುರ್ಗಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ಕೈಗೊಂಡ ಸಿಎಂ ಯಡಿಯೂರಪ್ಪ ಅವರು ನಂತರ ಅಲ್ಲಿಂದ ವಾಯುಪಡೆಯ ಹೆಲಿಕಾಪ್ಟರ್ ನಲ್ಲಿ ಯಾದಗಿರಿಯಲ್ಲಿ ಸಮೀಕ್ಷೆ ನಡೆಸಲಿದ್ದಾರೆ. ಬಳಿಕ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com