ನವೆಂಬರ್ ತಿಂಗಳಿನಲ್ಲಿ ಕಾಲೇಜುಗಳ ಆರಂಭಕ್ಕೆ ಸರ್ಕಾರ ಸಿದ್ಧತೆ

ನವೆಂಬರ್ ತಿಂಗಳಿನಿಂದ ಕಾಲೇಜುಗಳನ್ನು ತೆರೆಯಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥ್ ನಾರಾಯಣ ಅವರು ಹೇಳಿದ್ದಾರೆ. 
ಕಾಲೇಜುಗಳ ತೆರೆಯುವ ಕುರಿತು ಸರ್ಕಾರದ ನಿರ್ಧಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು
ಕಾಲೇಜುಗಳ ತೆರೆಯುವ ಕುರಿತು ಸರ್ಕಾರದ ನಿರ್ಧಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು

ಬೆಂಗಳೂರು: ನವೆಂಬರ್ ತಿಂಗಳಿನಿಂದ ಕಾಲೇಜುಗಳನ್ನು ತೆರೆಯಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥ್ ನಾರಾಯಣ ಅವರು ಹೇಳಿದ್ದಾರೆ. 

ಈಗಾಗಲೇ ಎಲ್ಲಾ ಕಾಲೇಜುಗಳಲ್ಲಿ ಆನ್'ಲೈನ್ ತರಗತಿಗಳು ಉತ್ತಮವಾಗಿ ನಡೆಯುತ್ತಿವೆ. ಡಿಜಿಟಲ್ ಕಲಿಕೆ, ಬೋಧನೆ ನಿರೀಕ್ಷೆಗೂ ಮೀರಿ ನಡೆಯುತ್ತಿದೆ. ಯುಜಿಸಿಯಿಂದ ಕಾಲೇಜು ಆರಂಭಕ್ಕೆ ಸೂಕ್ತ ಮಾಹಿತಿ, ಮಾರ್ಗಸೂಚಿ ಬಂದಿದೆ. ಅದರ ಅನ್ವಯ ಎಲ್ಲಾ ಸಿದ್ಧತೆ ಮಾಡಕೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳು ಆಫ್'ಲೈನ್ ತರಗತಿಗಳು ಆರಂಭವಾಗಲಿ ಎಂದು ಹೇಳುತ್ತಿದ್ದಾರೆ. ಶೀಘ್ರ ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಕಾಲೇಜು ಆರಂಭ ದಿನಾಂಕ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ. 

ನವೆಂಬರ್ ತಿಂಗಳಿನಲ್ಲಿ ಕಾಲೇಜುಗಳ ತೆರೆಯಲು ನಿರ್ಧರಿಸಲಾಗಿದೆ. ಆದರೆ, ಆಫ್'ಲೈನ್ ಮತ್ತು ಆನ್'ಲೈನ್ ತರಗತಿಗಳ ಕುರಿತ ಆಯ್ಕೆ ವಿದ್ಯಾರ್ಥಿಗಳಿಗೇ ನೀಡಲು ಚಿಂತನೆಗಳು ನಡೆಯುತ್ತಿವೆ ಎಂದು ಶಿಕ್ಷಣ ಇಲಾಖೆಯ ಉನ್ನತ ಮೂಲಗಳು ಮಾಹಿತಿ ನೀಡಿವೆ. 

ಈ ನಡುವೆ ವಿವಿಧ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳು ಸಭೆ ನಡೆಸಿ ಮಾತುಕತೆ ನಡೆಸಿದ್ದು, ಸಭೆಯಲ್ಲಿ ಅಗತ್ಯ ಬಿದ್ದರೆ, ಭಾನುವಾರದ ದಿನಗಳಲ್ಲೂ ತರಗತಿ ನಡೆಸಲು ಸಲಹೆಗಳು ಬಂದಿವೆ ಎಂದು ಹೇಳಲಾಗುತ್ತಿದೆ. ಇದಲ್ಲದೆ, ಕಾಲೇಜುಗಳನ್ನು ಯಾವ ರೀತಿ ತೆರೆಯಬಹುದು, ವೇಳಾಪಟ್ಟಿ ಹೇಗಿರಬೇಕೆಂಬುದರ ಕುರಿತಂತೆಯೂ ಚರ್ಚೆಗಳು ನಡೆದಿವೆ ಎಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com