ಕೊವಿಡ್-19: ಬೆಂಗಳೂರು ಆಸ್ಪತ್ರೆಗಳಲ್ಲಿ ಸೋಂಕಿತರ ದಾಖಲಾತಿಯಲ್ಲಿ ಶೇ.40ರಷ್ಟು ಇಳಿಕೆ

ಮಾರಕ ಕೊರೋನಾ ವೈರಸ್ ಆರ್ಭಟದಿಂದಾಗಿ ನಗರದ ಎಲ್ಲ ಆಸ್ಪತ್ರೆಗಳಲ್ಲೂ ಬೆಡ್ ಖಾಲಿ ಇಲ್ಲ ಎಂಬ ಮಾತು ಸಾಮಾನ್ಯವಾಗಿತ್ತು. ಆದರೆ ಕ್ರಮೇಣ ಈ ಪರಿಸ್ಥಿತಿ ತದ್ವಿರುದ್ಧವಾಗಿದ್ದು, ಬೆಂಗಳೂರಿನ ಆಸ್ಪತ್ರೆಗಳಲ್ಲಿಗೆ ದಾಖಲಾಗುತ್ತಿರುವ ಸೋಂಕಿತರ ಸಂಖ್ಯೆಯಲ್ಲಿ ಶೇ.40ರಷ್ಟು ಕುಸಿತವಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮಾರಕ ಕೊರೋನಾ ವೈರಸ್ ಆರ್ಭಟದಿಂದಾಗಿ ನಗರದ ಎಲ್ಲ ಆಸ್ಪತ್ರೆಗಳಲ್ಲೂ ಬೆಡ್ ಖಾಲಿ ಇಲ್ಲ ಎಂಬ ಮಾತು ಸಾಮಾನ್ಯವಾಗಿತ್ತು. ಆದರೆ ಕ್ರಮೇಣ ಈ ಪರಿಸ್ಥಿತಿ ತದ್ವಿರುದ್ಧವಾಗಿದ್ದು, ಬೆಂಗಳೂರಿನ ಆಸ್ಪತ್ರೆಗಳಲ್ಲಿಗೆ ದಾಖಲಾಗುತ್ತಿರುವ ಸೋಂಕಿತರ ಸಂಖ್ಯೆಯಲ್ಲಿ ಶೇ.40ರಷ್ಟು ಕುಸಿತವಾಗಿದೆ.

ಹೌದು.. ಅಕ್ಟೋಬರ್ 13ರಿಂದ ಕೋವಿಡ್ ಚಿಕಿತ್ಸೆಗಾಗಿಯೇ ನಿಯೋಜನೆಗೊಂಡಿರುವ ಆಸ್ಪತ್ರೆಗಳಲ್ಲಿ ದಾಖಲಾಗುತ್ತಿರುವ ಸೋಂಕಿತರ ಪ್ರಮಾಣದಲ್ಲಿ ಶೇ.40ರಷ್ಟು ಕುಸಿತ ಕಂಡುಬಂದಿದೆ. ಈ ಬಗ್ಗೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಮಾಹಿತಿ ಕಲೆ ಹಾಕಿದ್ದು, ಬೆಂಗಳೂರಿನಲ್ಲಿ ಕೋವಿಡ್ ಸೋಂಕಿಗೆ ಚಿಕಿತ್ಸೆ  ನೀಡುತ್ತಿರುವ ಆಸ್ಪತ್ರೆಗಳಿಗೆ ದಾಖಲಾಗುತ್ತಿರುವ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಕುಸಿತ ಕಂಡುಬಂದಿದೆ. 

ಈ ಬಗ್ಗೆ ಮಾಹಿತಿ ನೀಡಿರುವ ವಿಕ್ಟೋರಿಯಾ ಆಸ್ಪತ್ರೆಯ ಹಿರಿಯ ವೈದ್ಯರೊಬ್ಬರು ಮಾತನಾಡಿದ್ದು, ಆಸ್ಪತ್ರೆಗೆ ದಾಖಲಾಗುತ್ತಿರುವ ಸೋಂಕಿತರ ಪ್ರಮಾಣ ತಗ್ಗಿದೆ. ನಿಜಕ್ಕೂ ಇದು ಆಶಾದಾಯಕ ಸಂಗತಿಯಾಗಿದ್ದು, ವೈದ್ಯರ ಮೇಲಿನ ಅತೀವ ಒತ್ತಡ ಕಡಿಮೆಯಾಗಿದೆ. ಕೋವಿಡ್ ಸಾಂಕ್ರಾಮಿಕದ ಬಳಿಕ ವೈದ್ಯಕೀಯ  ಸಿಬ್ಬಂದಿಗಳು ಪರಿಸ್ಥಿತಿ ನಿಯಂತ್ರಣಕ್ಕಾಗಿ ಹಗಲು ರಾತ್ರಿ ದುಡಿಯುತ್ತಿದ್ದಾರೆ. ಇದರಿಂದ ನಮ್ಮ ಮೇಲೆ ಸಾಕಷ್ಟು ಒತ್ತಡವಿತ್ತು. ಆದರೀಗ ಸೋಂಕಿನ ಲಕ್ಷಣಗಳು ಕಡಿಮೆ ಇರುವ ಸೋಂಕಿತರು ಮನೆಯಲ್ಲೇ ಚಿಕಿತ್ಸೆ ಪಡೆಯಲು ಬಯಸುತ್ತಿದ್ದಾರೆ. ಕೇವಲ ಗಂಭೀರ ಪರಿಸ್ಥಿತಿಯಲ್ಲಿ ಮಾತ್ರ ಸೋಂಕಿತರು ಆಸ್ಪತ್ರೆಯತ್ತ  ಮುಖ ಮಾಡುತ್ತಿದ್ದಾರೆ. ಇದು ಆಸ್ಪತ್ರೆಗೆ ದಾಖಲಾಗುವ ಸೋಂಕಿತರ ಸಂಖ್ಯೆ ಕಡಿಮೆಯಾಗಲು ಕಾರಣವಾಗಿದೆ ಎಂದು ಹೇಳಿದರು.

ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್ಐ) ಡೀನ್ ಮತ್ತು ನಿರ್ದೇಶಕರಾದ ಡಾ.ಜಯಂತಿ ಸಿ ಆರ್ ಅವರು ಮಾತನಾಡಿ, ಕಳೆದೊಂದು ವಾರದಲ್ಲಿ, ಆಸ್ಪತ್ರೆಗೆ ದಾಖಲಾಗು ಸೋಂಕಿತರ ಪ್ರಮಾಣದಲ್ಲಿ ಶೇ.40ರಷ್ಟು ಕುಸಿತ ಕಂಡುಬಂದಿದೆ. ಆದರೆ ಹಬ್ಬದ ಸೀಸನ್  ಆರಂಭವಾಗುತ್ತಿದ್ದು, ಈ ವೇಳೆ ಸೋಂಕಿತರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಆದರೆ ಇದು ಆಗಬಾರದು ಎಂದು ಪ್ರಾರ್ಥಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಕೇವಲ ವಿಕ್ಟೋರಿಯಾ ಮಾತ್ರವಲ್ಲದೇ ಕೋವಿಡ್ ಚಿಕಿತ್ಸೆಗಾಗಿ ಮೀಸಲಿರಿಸಲಾಗಿರುವ ಲೇಡಿ ಕರ್ಜನ್ ಮತ್ತು ಬೌರಿಂಗ್ ಆಸ್ಪತ್ರೆಗಳಲ್ಲಿಯೂ ಸೋಂಕಿತರ ದಾಖಲಾತಿ ಪ್ರಮಾಣ ಶೇ.40 ರಿಂದ 50ರಷ್ಟು ಕುಸಿದಿದೆ. ಈ ಬಗ್ಗೆ ಸ್ವತಃ ಆಸ್ಪತ್ರೆಯ ನಿರ್ದೇಶಕ ಮನೋಜ್ ಕುಮಾರ್ ಅವರು, ಕಳೆದ ಮಂಗಳವಾರ  ಆಸ್ಪತ್ರೆಯ ಎಲ್ಲ ಬೆಡ್ ಗಳು ಭರ್ತಿಯಾಗಿದ್ದವು. ಆದರೆ ಇಂದು ಆಸ್ಪತ್ರೆಯಲ್ಲಿ 30 ಬೆಡ್ ಗಳು ಖಾಲಿಯಾಗಿವೆ. ಅಂತೆಯೇ ಚರಕ ಆಸ್ಪತ್ರೆಯಲ್ಲೂ 35 ಬೆಡ್ ಗಳು ಖಾಲಿ ಇವೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com