ಕಲಬುರಗಿ, ಯಾದಗಿರಿ, ರಾಯಚೂರಿನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ, ಹೆಚ್ಚಿನ ಹಣ ಬಿಡುಗಡೆ ಭರವಸೆ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಕಲಬುರ್ಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದರು.

Published: 21st October 2020 06:20 PM  |   Last Updated: 21st October 2020 06:20 PM   |  A+A-


cm-bsy

ಸಿಎಂ ಯಡಿಯೂರಪ್ಪ

Posted By : Lingaraj Badiger
Source : The New Indian Express

ಕಲಬುರ್ಗಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಕಲಬುರ್ಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದರು.

ಅತಿವೃಷ್ಟಿಯಿಂದ ಬೆಳೆ ನಾಶವಾಗಿದ್ದು, ಹಲವು ಮನೆಗಳು ಬಿದ್ದಿವೆ. ಇದರ ಬಗ್ಗೆ ಮಾಹಿತಿ ಪಡೆಯಲು ವೈಮಾನಿಕ ಸಮೀಕ್ಷೆ ನಡೆಸಲು ತೆರಳುತ್ತಿದ್ದೇವೆ. ಈಗಾಗಲೇ ಪರಿಹಾರ ಹಣ ಬಿಡುಗಡೆ ಮಾಡಲಾಗಿದೆ. ಇನ್ನು ಹೆಚ್ಚಿನ ಹಣವನ್ನು ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಲಾಗುವುದು ತಕ್ಷಣ ಜನರ ಸಮಸ್ಯೆಗೆ ಸ್ಪಂದಿಸಲು ಸೂಚಿಸಲಾಗಿದೆ ಎಂದು ಅಧಿಕಾರಿಗಳ ಸಭೆಯ ಬಳಿಕ ಸಿಎಂ ತಿಳಿಸಿದ್ದಾರೆ.

ಸಮೀಕ್ಷೆಯ ಬಳಿಕ ಕೇಂದ್ರಕ್ಕೆ ವರದಿ ಸಲ್ಲಿಸಲಾಗುವುದು. ಬಳಿಕ ಕೇಂದ್ರ ತಂಡ ಬರಬಹುದು ಎಂದು ಪ್ರಶ್ನೆಯೊಂದಕ್ಕೆ ಸಿಎಂ ಉತ್ತರಿಸಿದರು.

ಕಲಬುರ್ಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳ ನೆರೆಪೀಡಿತ ಪ್ರದೇಶದ ವೀಕ್ಷಣೆ ಮಾಡಿದ ನಂತರ ಯಡಿಯೂರಪ್ಪ ಕಲಬುರ್ಗಿಗೆ ಆಗಮಿಸಿದರು. ವಿಮಾನ ನಿಲ್ದಾಣದಲ್ಲಿಯೇ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ಈ ವೇಳೆ ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾನಿಯ ಮಾಹಿತಿ ನೀಡಿದರು. ಜಂಟಿ ಸರ್ವೆ ನಂತರ ಹಾನಿಯ ನಿಖರ ಮಾಹಿತಿ ಸಿಗಲಿದ್ದು, ಎನ್.ಡಿ.ಆರ್.ಎಫ್. ನಿಯಮದ ಅಡಿ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪಶು ಸಂಗೋಪನೆ ಸಚಿವ ಪ್ರಭು ಚೌಹಾಣ್, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸಿಎಂ ಯಡಿಯೂರಪ್ಪ ಅವರು ವಿಜಯಪುರ ಜಿಲ್ಲೆಯಲ್ಲೂ ಇಂದು ವೈಮಾನಿಕ ಸಮೀಕ್ಷೆ ನಡೆಸಬೇಕಾಗಿತ್ತು. ಆದರೆ ಹೆಲಿಕ್ಯಾಪ್ಟರ್​ ಹಾರಾಟಕ್ಕೆ ಪ್ರತಿಕೂಲ ಹವಾಮಾನ ಇಲ್ಲದ ಕಾರಣ ಸಮೀಕ್ಷೆಯನ್ನು ಅರ್ಧಕ್ಕೆ ಮೊಟಕುಗೊಳಿಸಿದ ಸಿಎಂ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ.

Stay up to date on all the latest ರಾಜ್ಯ news
Poll
RBI

ಕಾರ್ಪೊರೇಟ್‌ ಕಂಪನಿಗಳಿಗೆ ಬ್ಯಾಂಕ್‌ ಆರಂಭಿಸಲು ಅನುಮತಿಸುವಂತೆ ಕೇಂದ್ರ ಸರ್ಕಾರಕ್ಕೆ ಆರ್ ಬಿಐ ನೀಡಿರುವ ಸಲಹೆಯನ್ನು ಸ್ವಾಗತಿಸುತ್ತೀರಾ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp