ಸಿಲಿಕಾನ್ ಸಿಟಿಯಲ್ಲಿ ಇಂದೂ ಕೂಡ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಕಳೆದ 2 ದಿನಗಳಿಂದ ಸುರಿದ ಭಾರೀ ಮಳೆಗೆ ಈಗಾಗಲೇ ನಲುಗಿ ಹೋಗಿರುವ ಸಿಲಿಕಾನ್ ಸಿಟಿಯಲ್ಲಿ ಬುಧವಾರ ಕೂಡ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕಳೆದ 2 ದಿನಗಳಿಂದ ಸುರಿದ ಭಾರೀ ಮಳೆಗೆ ಈಗಾಗಲೇ ನಲುಗಿ ಹೋಗಿರುವ ಸಿಲಿಕಾನ್ ಸಿಟಿಯಲ್ಲಿ ಬುಧವಾರ ಕೂಡ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 3-4 ಗಂಟೆಗಳ ಕಾಲ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಬೆಂಗಳೂರಿನಲ್ಲಿ ಮಂಗಳವಾರ ಬೆಳಿಗ್ಗೆ 8.30 ರಿಂದ ಬುಧವಾರ ಬೆಳಗಿನ ಜಾವ 5.30ರವರೆಗೆ 66.8 ಎಂಎಂ ಮಳೆಯಾಗಿದೆ. ಇದರಂತೆ ಇಂದೂ ಕೂಡ 3-4 ಗಂಟೆಗಳ ಕಾಲ ಮಳೆಯಾಗುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ನಿನ್ನೆ ಒಂದೇ ದಿನ ಬೆಂಗಳೂರು ನಗರ ಜಿಲ್ಲೆಯ ರಾಜರಾಜೇಶ್ವರಿ ನಗರದಲ್ಲಿ 87.5 ಎಂಎಂ, ಚನ್ನೇಹಳ್ಳಿ 126.5 ಎಂಎಂ, ಕಗ್ಗಲೀಪುರ 67 ಎಂಎಂ, ನೆಲಗುಳಿ 65.5 ಎಂಎಂ, ಬಸವನಗುಡಿ 64.45 ಎಂಎಂ, ಮಚೋಹಳ್ಳಿ 74.5 ಎಂಎಂ, ಕೊಡಿಗೇಹಳ್ಳಿ 66 ಎಂಎಂ ಮಳೆಯಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com