ಇಂದು, ನಾಳೆ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ

ಕಳೆದ ಕೆಲ ದಿನಗಳಿಂದ ಅಬ್ಬರಿಸುತ್ತಿರುವ ವರುಣ ಗುರುವಾರ ಮತ್ತು ಶುಕ್ರವಾರ ಕೂಡ ಆರಂಭಿಸುವ ಸಾಧ್ಯತೆಗಳಿದ್ದು, ಈ ನಡುವಲ್ಲೇ ಬೆಂಗಳೂರು ನಗರ ಜಿಲ್ಲೆಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕಳೆದ ಕೆಲ ದಿನಗಳಿಂದ ಅಬ್ಬರಿಸುತ್ತಿರುವ ವರುಣ ಗುರುವಾರ ಮತ್ತು ಶುಕ್ರವಾರ ಕೂಡ ಆರಂಭಿಸುವ ಸಾಧ್ಯತೆಗಳಿದ್ದು, ಈ ನಡುವಲ್ಲೇ ಬೆಂಗಳೂರು ನಗರ ಜಿಲ್ಲೆಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. 

ಅ.22 ರಂದು ಬೆಂಗಳೂರು ನಗರದಲ್ಲಿ ಗುಡುಗು, ಮುಂಚು ಸಹಿತ ಧಾರಾಕಾರ ಮಳೆ ಬೀಳಲಿದೆ. ಮಂಗಳವಾರ ತಡರಾತ್ರಿ ಅಂದಾಜು 700 ಮಿ.ಮೀ ನಷ್ಟು ಮಳೆಯಾಗಿತ್ತು. ಅದೇ ರೀತಿ ಗುರುವಾರವೂ ಮಳೆ ಬರುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲೆಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. 

ಬಂಗಾಳ ಕೊಲ್ಲಿಯಲ್ಲಿ ಗಾಳಿಯ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ನಗರದಲ್ಲಿ ಮಳೆ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

ನಿನ್ನೆ ನಗರದಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಿದ್ದು, ಮೋಡ ಕವಿದ ಹಾಗೂ ಚಳಿಯ ವಾತಾವರಣವಿತ್ತು. ನಿನ್ನೆ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣದ ಜೊತೆಗೆ ಆಗಾಗ ಬಿಸಿಲು ಕಂಡು ಬಂದಿತ್ತು. ಮಧ್ಯಾಹ್ನದ ನಂತರ ವಿಜಯನಗರ, ಹಂಪಿನಗರ, ಅತ್ತಿಗುಪ್ಪೆ, ಆರ್.ಆರ್.ನಗರ, ನೆಲಗುಳಿ, ಕಾಡುಗೋಡಿ, ಹಗದೂರು, ದೇವನಹಳ್ಳಿಯ ಕೊಯಿರಾ ಭಾಗದಲ್ಲಿ ತುಂತುರು ಮಳೆ ಬಿದ್ದಿದೆ. ಇದರ ಹೊರತು ಎಲ್ಲಿಯೂ ಅಷ್ಟಾಗಿ ಮಳೆ ದಾಖಲಾದ ಬಗ್ಗೆ ವರದಿಯಾಗಿಲ್ಲ .

ಇನ್ನೆರಡು ದಿನ ಭಾರೀ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಗೆ ನೀಡಲಾಗಿದೆ. ಕರಾವಳಿಯಲ್ಲಿ ಅ.22ರಿಂದ 24ರವರೆಗೆ ಮೂರು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com