ಪೊಲೀಸರ ಸುರಕ್ಷತೆ ಸರ್ಕಾರದ ಮೊದಲ ಆದ್ಯತೆ, ಅವರೇ ನಿಜವಾದ ವಾರಿಯರ್ಸ್: ಬೊಮ್ಮಾಯಿ

ಕೋವಿಡ್-19 ನಿಂದಾಗಿ ಪ್ರಾಣ ಕಳೆದುಕೊಳ್ಳುವ ಭೀತಿಯ ನಡುವೆಯೂ ಪ್ರಾಣದ ಹಂಗು ತೊರೆದು ಹೋರಾಡಿದ ಕೀರ್ತಿ ಮತ್ತು ನೈಜ ಕೊರೋನಾ ವಾರಿಯರ್ಸ್ ಗಳು ಎಂದರೆ ಪೊಲೀಸರು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

ಬೆಂಗಳೂರು: ಕೋವಿಡ್-19 ನಿಂದಾಗಿ ಪ್ರಾಣ ಕಳೆದುಕೊಳ್ಳುವ ಭೀತಿಯ ನಡುವೆಯೂ ಪ್ರಾಣದ ಹಂಗು ತೊರೆದು ಹೋರಾಡಿದ ಕೀರ್ತಿ ಮತ್ತು ನೈಜ ಕೊರೋನಾ ವಾರಿಯರ್ಸ್ ಗಳು ಎಂದರೆ ಪೊಲೀಸರು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯ ಪೊಲೀಸ್ ಇಲಾಖೆಯಿಂದ ಪೊಲೀಸ್ ಸಂಸ್ಮರಣಾ ದಿನಾಚರಣೆ ಅಂಗವಾಗಿ ನಗರದ ಚಿತ್ರಕಲಾ ಪರಿಷತ್ತಿನಲ್ಲಿ ಹಮ್ಮಿಕೊಳ್ಳಲಾಗಿದ್ದ "ಸ್ಮರಣಾಂಜಲಿ" ಪೊಲೀಸ್ ಅಮರವೀರರ ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿ ಮಾತಾನಾಡಿದ ಅವರು, ಪೊಲೀಸ್ ಇಲಾಖೆಗೆ ಪ್ರೋತ್ಸಾಹ ಧನಕ್ಕಿಂತ ಮುಖ್ಯವಾಗಿ ನಿಮ್ಮ ಜೊತೆ ನಾವಿದ್ದೇವೆ ಎಂಬ ಬೆಂಬಲದ ಅಗತ್ಯವಿದೆ ಎಂದು ಹೇಳಿದರು.

ಪೊಲೀಸರ ಕಾರ್ಯವ್ಯಾಪ್ತಿ ಬದಲಾಗುತ್ತಿರುವ ಜೀವನಕ್ರಮಕ್ಕೆ ಅನುಗುಣವಾಗಿ ಹೆಚ್ಚಾಗುತ್ತಿದ್ದು, ಹೊಸ ತಂತ್ರಜ್ಞಾನದ ಕಲಿಕೆ ಅವಶ್ಯಕವಾಗಿದೆ. ಅದಕ್ಕಾಗಿ ವಿಶೇಷ ತರಬೇತಿಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಪೊಲೀಸರ ಸುರಕ್ಷತೆ, ಜೀವ ಮತ್ತು ಜೀವನ ಕಟ್ಟಿಕೊಡುವುದು ಸರ್ಕಾರದ ಜವಬ್ದಾರಿಯಾಗಿದೆ. ಮುಖ್ಯವಾಗಿ ಅವರ ಆರೋಗ್ಯ ಕಾಪಾಡುವುದಕ್ಕಾಗಿ ಹೊಸ ಯೋಜನೆಯೊಂದನ್ನು ರೂಪಿಸಲಾಗುತ್ತಿದೆ ಎಂದು ಗೃಹ ಸಚಿವರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com