ದಕ್ಷಿಣ ಕನ್ನಡ, ಧಾರವಾಡದಲ್ಲಿ ಇಳಿಯುತ್ತಿರುವ ಕೊರೋನಾ ಅಬ್ಬರ!
ಕೊರೋನಾ ಅಬ್ಬರಕ್ಕೆ ಆತಂಕಕ್ಕೊಳಗಾಗಿದ್ದ ದಕ್ಷಿಣ ಕನ್ನಡ ಹಾಗೂ ಧಾರವಾಡ ಜಿಲ್ಲೆ ಜನರಿಗೆ ಕೊಂಚ ನಿಟ್ಟುಸಿರುವ ಬಿಡುವಂತಹ ಬೆಳವಣಿಗೆಗಳು ಜಿಲ್ಲೆಯಲ್ಲಿ ಇದೀಗ ಕಂಡು ಬರುತ್ತಿದೆ.
Published: 22nd October 2020 01:59 PM | Last Updated: 22nd October 2020 01:59 PM | A+A A-

ಸಂಗ್ರಹ ಚಿತ್ರ
ಮಂಗಳೂರು: ಕೊರೋನಾ ಅಬ್ಬರಕ್ಕೆ ಆತಂಕಕ್ಕೊಳಗಾಗಿದ್ದ ದಕ್ಷಿಣ ಕನ್ನಡ ಹಾಗೂ ಧಾರವಾಡ ಜಿಲ್ಲೆ ಜನರಿಗೆ ಕೊಂಚ ನಿಟ್ಟುಸಿರುವ ಬಿಡುವಂತಹ ಬೆಳವಣಿಗೆಗಳು ಜಿಲ್ಲೆಯಲ್ಲಿ ಇದೀಗ ಕಂಡು ಬರುತ್ತಿದೆ.
ಕಳೆದೊಂದು ವಾರದಿಂದ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿ ಆರ್ಭಟ ತೀವ್ರವಾಗಿತ್ತು. 2 ತಿಂಗಳ ಹಿಂದೆ ಈ ಎರಡೂ ಜಿಲ್ಲೆಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಶೇ.28ಕ್ಕೆ ತಲುಪಿತ್ತು. ಆದರೀಗ ಈ ಪ್ರಮಾಣ ಶೇ.5ಕ್ಕೆ ಇಳಿಕೆಯಾಗಿದೆ. ಜನರಲ್ಲಿನ ಆಂತಕ ಕೊಂಚ ಕಡಿಮೆಯಾಗುವಂತೆ ಮಾಡಿದೆ.
ಜಿಲ್ಲೆಗಳಲ್ಲಿ ಸಾವಿನ ಸಂಖ್ಯೆ ಇಳಿಕೆಯಾಗುತ್ತಿದ್ದು, ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗುತ್ತಿರುವವ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ನಡುವೆ ಜಿಲ್ಲೆಯಲ್ಲಿ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಳ ಮಾಡಲಾಗಿದ್ದು, ಜನರು ಸ್ವಯಂಪ್ರೇರಿತರಾಗಿ ಪರೀಕ್ಷೆಗೊಳಪಡುತ್ತಿದ್ದಾರೆ. ಪ್ರತೀನಿತ್ಯ 3,000ಕ್ಕೂ ಹೆಚ್ಚು ಮಂದಿಯನ್ನು ಪರೀಕ್ಷೆಗೊಳಪಡಿಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.
ಕೆಲ ವಾರಗಳ ಹಿಂದೆ 5,000ಕ್ಕೆ ತಲುಪಿದ್ದ ಸಕ್ರಿಯ ಪ್ರಕರಣಗಳ ಸಂಖ್ಯೆ ಇದೀಗ 3,000ಕ್ಕೆ ಇಳಿಕೆಯಾಗಿದೆ ಎಂದು ಉಪ ಆಯುಕ್ತ ಕೆ.ವಿ.ರಾಜೇಂದ್ರ ಅವರು ಹೇಳಇದ್ದಾರೆ.
ಇನ್ನು ಧಾರವಾಡ ಜಿಲ್ಲೆಯಲ್ಲಿ ಕಳೆದ ನಾಲ್ಕು ತಿಂಗಳಲ್ಲಿ ಮೊದಲ ಬಾರಿಗೆ ಸಕಾರಾತ್ಮಕ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ದಿನಕ್ಕೆ 300 ಪ್ರಕರಣಗಳನ್ನು ವರದಿ ಮಾಡುತ್ತಿದ್ದ ಜಿಲ್ಲೆಯಲ್ಲಿ ಈಗ 150 ಪ್ರಕರಣಗಳು ದಾಖಲಾಗುತ್ತಿವೆ. ಇದಕ್ಕೆ ಪ್ರಮುಖ ಕಾರಣವೆಂದರೆ ಆರೋಗ್ಯ ಇಲಾಖೆಯು ಜಿಲ್ಲಾಡಳಿತದೊಂದಿಗೆ ದಿನಕ್ಕೆ 1,800 ಕ್ಕೂ ಹೆಚ್ಚು ಪರೀಕ್ಷೆಗಳನ್ನು ನಡೆಸುತ್ತಿರುವುದಾಗಿದೆ ಎಂದು ಹೇಳಲಾಗುತ್ತಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ ಕ್ಷೀಣಿಸುತ್ತಿದ್ದಂತೆಯೇ ಕೋವಿಡ್ ಕೇರ್ ಕೇಂದ್ರಗಳನ್ನು ಬಂದ್ ಮಾಡಲಾಗುತ್ತಿದೆ. ಸಕಾರಾತ್ಮಕ ಪ್ರಕರಣಗಳ ಸಂಖ್ಯೆ ಕ್ಷೀಣಿಸುತ್ತಿರುವುದರಿಂದ, ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಕಡಿಮೆಯಾಗುವ ಸಾಧ್ಯತೆಗಳಿವೆ ಎಂದು ಎಂದು ಆರೋಗ್ಯಾಧಿಕಾರಿ ಡಾ.ಯಶ್ವಂತ್ ಮಡಿಂಕರ್ ಹೇಳಿದ್ದಾರೆ.
ಜೂನ್ ಆರಂಭದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 200ಕ್ಕಿಂತ ಕಡಿಮೆಯಿತ್ತು. ನಂತರ ಸಕ್ರಿಯ ಪ್ರಕರಣಗಳು ಕ್ರಮೇಣ ಹೆಚ್ಚಾಗಿದ್ದವು. ಜುಲೈ ಮಧ್ಯಂತರಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,200 ತಲುಪಿದ್ದವು. ಸೆಪ್ಟೆಂಬರ್ನಲ್ಲಿ, ಸಕ್ರಿಯ ಪ್ರಕರಣಗಳು ಸುಮಾರು 2,500 ಆಗಿದ್ದು, ಇದು ಅಕ್ಟೋಬರ್ ಮೊದಲ ವಾರದವರೆಗೂ ಮುಂದುವರೆದಿತ್ತು.
20 ದಿನಗಳ ಅವಧಿಯಲ್ಲಿ, ಹೊಸ ಪ್ರಕರಣಗಳ ಸಂಖ್ಯೆ ಕುಸಿತ ಕಂಡಿದ್ದು ಮತ್ತು ಸಕ್ರಿಯ ಪ್ರಕರಣಗಳು ಅಕ್ಟೋಬರ್ 5 ರಂದು 2,524 ರಿಂದ ಬುಧವಾರದವರೆಗೆ 1098 ಕ್ಕೆ ಇಳಿಕೆಯಾಗಿದೆ.