ಜ್ಞಾನಭಾರತಿ ಸಾಮೂಹಿಕ ಅತ್ಯಾಚಾರ ಪ್ರಕರಣ: 7 ಮಂದಿಗೆ ಜೀವಾವಧಿ ಶಿಕ್ಷೆ ಕಾಯಂ
ಜ್ಞಾನಭಾರತಿ ಆವರಣದಲ್ಲಿ 2012ರಲ್ಲಿ ನಡೆದಿದ್ದ ಕಾನೂನು ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ 7 ದೋಷಿಗಳಿಗೆ ಅಧೀನ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ಕಾಯಂಗೊಳಿಸಿದೆ.
Published: 22nd October 2020 08:21 AM | Last Updated: 22nd October 2020 08:21 AM | A+A A-

ಸಂಗ್ರಹ ಚಿತ್ರ
ಬೆಂಗಳೂರು: ಜ್ಞಾನಭಾರತಿ ಆವರಣದಲ್ಲಿ 2012ರಲ್ಲಿ ನಡೆದಿದ್ದ ಕಾನೂನು ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ 7 ದೋಷಿಗಳಿಗೆ ಅಧೀನ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ಕಾಯಂಗೊಳಿಸಿದೆ.
ಜೀವಾವಧಿ ಶಿಕ್ಷೆ ರದ್ದುಪಡಿಸಲು ಕೋರಿ ದೊಡ್ಡ ಈರಯ್ಯ ಸೇರಿ 7 ದೋಷಿಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಾಲಮೂರ್ತಿ ವಿ.ವೀರಪ್ಪ ಮತ್ತು ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ದ ವಿಭಾಗೀಯ ಪೀಠ ಬುಧವಾರ ವಜಾಗೊಳಿಸಿತು.
ರಾಷ್ಟ್ರೀಯ ಕಾನೂನು ಶಾಲೆಯಲ್ಲಿ ಕಾನೂನು ಪದವಿ ವ್ಯಾಸಂಗ ಮಾಡುತ್ತಿದ್ದ ನೇಪಾಳ ಮೂಲದ ಯುವತಿ, 2012ರ ಅ.13ರಂದು ಜ್ಞಾನಭಾರತಿ ಆವರಣದಲ್ಲಿ ತನ್ನ ಪ್ರಿಯಕರನ ಜತೆ ಕಾರಿನಲ್ಲಿ ಕುಳಿತು ಮಾತನಾಡುತ್ತಿದ್ದಳು.
ಜ್ಞಾನಭಾರತಿ ಕ್ಯಾಂಪಸ್‌ನಲ್ಲಿರುವ ಹಳೆ ಪರೀಕ್ಷಾ ಭವನದ ಬಳಿ ರಾತ್ರಿ ಶ್ರೀಗಂಧ ಕಳವಿಗೆ ಬಂದ ಎಂಟು ಆರೋಪಿಗಳು, ಯುವತಿಯ ಗೆಳೆಯ ನಿರ್ಮಲ್ ಮೇಲೆ ಹಲ್ಲೆ ನಡೆಸಿದ್ದರು. ನಂತರ ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿ ಪರಾರಿಯಾಗಿದ್ದರು. ಈ ಸಂಬಂಧ ಜ್ಞಾನಭಾರತಿ ಠಾಣೆಗೆ ಯುವತಿ ದೂರು ನೀಡಿದ್ದಳು.