ಅತಿವೃಷ್ಟಿ ಹಾನಿಯ ಬಗ್ಗೆ ಕೇಂದ್ರಕ್ಕೆ ಶೀಘ್ರ ವರದಿ: ಮುಖ್ಯಮಂತ್ರಿ ಯಡಿಯೂರಪ್ಪ

ರಾಜ್ಯದ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದಲ್ಲಿ ಅತಿವೃಷ್ಟಿಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸಂತ್ರಸ್ತರಿಗೆ ಹೆಚ್ಚಿನ ಅನುದಾನ ನೀಡಲು ಕೇಂದ್ರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದಲ್ಲಿ ಅತಿವೃಷ್ಟಿಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸಂತ್ರಸ್ತರಿಗೆ ಹೆಚ್ಚಿನ ಅನುದಾನ ನೀಡಲು ಕೇಂದ್ರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದಲ್ಲಿ ಅತಿವೃಷ್ಟಿಯ ಆಗಿರುವ ಹಾನಿ ಸಮೀಕ್ಷೆ ಮಾಡಿದ್ದೇವೆ. ಕಳೆದ ಬಾರಿಗಿಂತಲೂ ಈ ಬಾರಿ ಹಾನಿ ಪ್ರಮಾಣ ಹೆಚ್ಚಾಗಿದೆ. ಭಾರಿ ಪ್ರಮಾಣದಲ್ಲಿ ಬೆಳೆಹಾನಿ ಆಗಿದೆ. ಮನೆ ಕಳೆದುಕೊಂಡವರಿಗೆ ತಕ್ಷಣ ಈಗಾಗಲೇ ಹತ್ತು ಸಾವಿರ ರೂಪಾಯಿ ತಾತ್ಕಾಲಿಕ ಪರಿಹಾರ ವಿತರಣೆ ಮಾಡಿದ್ದೇವೆ ಎಂದರು. 

ಹಾನಿಯ ಅಂದಾಜಿನ ಬಗ್ಗೆ ಇಂದು ಸಚಿವ ಸಂಪುಟದಲ್ಲೂ ಚರ್ಚಿಸಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗುವುದು. ಎನ್ ಡಿ ಆರ್ ಎಫ್ ನಿಯಮಾವಳಿ ತಿದ್ದುಪಡಿ ಬಗ್ಗೆಯೂ ಚರ್ಚಿಸುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಮುಖ್ಯಮಂತ್ರಿಯವರು ನಿನ್ನೆಯಷ್ಟೇ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com