ಪೊಲೀಸರ ಹೆಸರಿನಲ್ಲಿ ಆನ್'ಲೈನ್ ವಂಚನೆ: ನಾಲ್ವರ ಬಂಧನ

ಇತ್ತೀಚಿನ ಸಾಮಾಜಿಕ ಜಾಲತಾಣಗಳಲ್ಲಿ ಡಿಜಿಪಿ ಪ್ರವೀಣ್ ಸೂದ್ ಸೇರಿದಂತೆ ಹಿರಿ-ಕಿರಿಯ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಖಾತೆ ತೆರೆದು ವಂಚಿಸುತ್ತಿದ್ದ ನಾಲ್ವರನ್ನು ಸಿಐಡಿ ಸೈಬರ್ ಕ್ರೈಂ ಪೊಲೀಸರ ಬೆಲೆಗೆ ಬಿದ್ದಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಇತ್ತೀಚಿನ ಸಾಮಾಜಿಕ ಜಾಲತಾಣಗಳಲ್ಲಿ ಡಿಜಿಪಿ ಪ್ರವೀಣ್ ಸೂದ್ ಸೇರಿದಂತೆ ಹಿರಿ-ಕಿರಿಯ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಖಾತೆ ತೆರೆದು ವಂಚಿಸುತ್ತಿದ್ದ ನಾಲ್ವರನ್ನು ಸಿಐಡಿ ಸೈಬರ್ ಕ್ರೈಂ ಪೊಲೀಸರ ಬೆಲೆಗೆ ಬಿದ್ದಿದ್ದಾರೆ. 

ರಾಜಸ್ಥಾನ ಮೂಲದ ಅನ್ಸರ್, ಬಲ್ವಿಂದರ್ ಸಿಂಗ್, ಸದ್ದಾಂ ಹಾಗೂ ಸೈನಿ ಬಂಧಿತ ಆರೋಪಿಗಳಾಗಿದ್ದಾರೆ. 

ಆರೋಪಿಗಳಿಂದ ಮೊಬೈಲ್ ಹಾಗೂ ನಕಲಿ ದಾಖಲೆಗಳು ಸೇರಿದಂತೆ ಇತರೆ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಶಕೀಲ್ ಪತ್ತೆಗೆ ಕಾರ್ಯಾಚರಣೆ ಮುಂದುವರೆದಿದೆ.

ಕೆಲ ತಿಂಗಳಿಂದ ನಿರಂತರವಾಗಿ ಫೇಸ್'ಬುಕ್ ಹಾಗೂ ವಾಟ್ಸಾಪ್ ಗಳಲ್ಲಿ ಪೊಲೀಸ್ ಅಧಿಕಾರಿಗಳ ಭಾವಿಚ್ತರ ಕದ್ದು ನಕಲಿಖಾತೆ ತೆಗೆದು ಜನರಿಂದ ಹಣ ಪಡೆದು ಮೋಸಗೊಳಿಸುತ್ತಿದ್ದರು. ಐಪಿ ಅಡ್ರೆಸ್ ಆಧರಿಸಿ ವಂಚಕ ಜಾಲವನ್ನು ಪತ್ತೆ ಹಚ್ಚಲಾಗಿದೆ ಎಂದು ಅಧಇಕಾರಿಗಳು ಮಾಹಿತಿ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com