ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಕೊಂಚ ಕಡಿಮೆಯಾಗುತ್ತಿದ್ದು 4,471 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 7,98,378ಕ್ಕೆ ಏರಿಕೆಯಾಗಿದೆ.
ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 52 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 10,873ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2,251 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 3,23,305ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಇಂದು 26 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.
ಇಂದು 7,153 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 7,00,737ಕ್ಕೆ ಏರಿಕೆಯಾಗಿದೆ. 86,749 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಪೈಕಿ 935 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
Advertisement