ರಾಜಕಾಲುವೆ ಒತ್ತುವರಿದಾರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಆರ್. ಅಶೋಕ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿನ್ನೆ ಧಾರಾಕಾರ ಮಳೆ ಸುರಿದ ಪರಿಣಾಮ ಹೊಸಕೆರೆಹಳ್ಳಿ ವಾರ್ಡ್-161ರ ದತ್ತಾತ್ರೇಯ ನಗರ ವ್ಯಾಪ್ತಿಯಲ್ಲಿ ಮಳೆ ಅನಾಹುತ ಪ್ರದೇಶಕ್ಕೆ ಶನಿವಾರ ಕಂದಾಯ ಸಚಿವ ಆರ್.ಅಶೋಕ್ ಭೇಟಿ ನೀಡಿ ಪರಿಶೀಲಿಸಿದರು.
ಸಚಿವ ಆರ್ ಅಶೋಕ್
ಸಚಿವ ಆರ್ ಅಶೋಕ್

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿನ್ನೆ ಧಾರಾಕಾರ ಮಳೆ ಸುರಿದ ಪರಿಣಾಮ ಹೊಸಕೆರೆಹಳ್ಳಿ ವಾರ್ಡ್-161ರ ದತ್ತಾತ್ರೇಯ ನಗರ ವ್ಯಾಪ್ತಿಯಲ್ಲಿ ಮಳೆ ಅನಾಹುತ ಪ್ರದೇಶಕ್ಕೆ ಶನಿವಾರ ಕಂದಾಯ ಸಚಿವ ಆರ್.ಅಶೋಕ್ ಭೇಟಿ ನೀಡಿ ಪರಿಶೀಲಿಸಿದರು.

ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತಾ, ಆಯುಕ್ತರು ಮಂಜುನಾಥ್ ಪ್ರಸಾದ್, ವಿಶೇಷ ಆಯುಕ್ತರು(ಯೋಜನೆ) ಮನೋಜ್ ಜೈನ್, ಮುಖ್ಯ ಅಭಿಯಂತರರು (ಬೃಹತ್ ನೀರುಗಾಲುವೆ) ಪ್ರಹ್ಲಾದ್, ವಲಯ ಜಂಟಿ ಆಯುಕ್ತರು ವೀರಭದ್ರ ಸ್ವಾಮಿ ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಕೂಡ ಸಚಿವರ ಜೊತೆ ಆಗಮಿಸಿದ್ದರು.

ಬಿಬಿಎಂಪಿ ಹಲವಾರು ಭಾಗಗಳಲ್ಲಿ ನಿನ್ನೆ ಧಾರಾಕಾರ ಮಳೆಯಾಗಿದ್ದು, ನಿನ್ನೆ ರಾತ್ರಿ ದತ್ತಾತ್ರೇಯ ನಗರಕ್ಕೆ ಭೇಟಿ ಮಾಡಿ ಸ್ಥಳ ಪರಿಶೀಲನೆ ಮಾಡಲಾಗಿದೆ. ಎನ್.ಡಿ.ಆರ್.ಆಫ್ ತಂಡ ಶ್ರಮ ವಹಿಸಿ ಕೆಲಸ ಮಾಡಿದ್ದು, ಮೂರು ಮಂದಿಯನ್ನು ಕಾಪಾಡಲಾಗಿದೆ‌ ಎಂದರು.

ದಕ್ಷಿಣ ಭಾಗದ ವ್ಯಾಪ್ತಿಯ ಬಹುತೇಕ ನೀರು ಇದೇ ರಾಜಕಾಲುವೆ ಮೂಲಕ ಅರಿದು ಹೋಗಲಿದೆ‌. ರಾಜಕಾಲುವೆ ಒತ್ತುವರಿ ಮಾಡಿದವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಈಗ ಏನು ಅವಾಂತರ ಆಗಿದೆ ಎನ್ನುವುದನ್ನು ಪರಿಶೀಲನೆ ಮಾಡಲಾಗಿದೆ. ರಾತ್ರಿ ಬಂದು ಎಲ್ಲರ ಮನೆಗೆ ಭೇಟಿ ಕೊಟ್ಟಿದ್ದೇನೆ.  ಏನು ನಷ್ಟವಾಗಿದೆಯೋ ಅದಕ್ಕೆ ಪರಿಹಾರ ಕೊಡಲಾಗುತ್ತದೆ.  ಅದಕ್ಕಾಗಿಯೇ ಬಿಬಿಎಂಪಿ ಅಧಿಕಾರಿಗಳ ತಂಡ ಮಾಡಿ ಚರ್ಚಿಸಲಾಗಿದೆ ಎಂದು ಹೇಳಿದರು.

ರಾಜಕಾಲುವೆ ದುರಸ್ತಿ ಕಾಮಗಾರಿ ಪ್ರಗತಿಯಲ್ಲಿದ್ದು, ತಡೆಗೋಡೆಗೆ ಅಳವಡಿಸಿರುವ ಹಳೆಯ ಕಲ್ಲುಗಳನ್ನು ತೆಗೆದು ಕಾಂಕ್ರೀಟ್ ತಡೆಗೋಡೆ ನಿರ್ಮಿಸಲಾಗುತ್ತಿದೆ. ನಿನ್ನೆ ಅಧಿಕ ಮಳೆಯಾದ ಪರಿಣಾಮ ಈ ಭಾಗದಲ್ಲಿ ಪ್ರವಾಹ ಸ್ಥಿತಿ ಉಂಟಾಗಿದ್ದು, ಈ ಸಂಬಂಧ ಮುಖ್ಯಮಂತ್ರಿ ಸಭೆ ಕರೆದಿದ್ದಾರೆ ಎಂದರು. 

ಸ್ಥಳೀಯವಾಗಿ ಆಗಿರುವ ಅನಾಹುತ, ಪರಿಹಾರ ನೀಡುವ ಹಾಗೂ ತ್ವರಿತ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಬಗ್ಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಶೋಕ್ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com