ಕೊರೋನಾಗೆ ಲಸಿಕೆ ಲಭ್ಯವಾಗುತ್ತಿದ್ದಂತೆಯೇ ಉಚಿತವಾಗಿ ನೀಡುವ ಕುರಿತು ಚಿಂತನೆ: ರಾಜ್ಯ ಸರ್ಕಾರ

ಕೊರೋನಾ ವೈರಸ್'ಗೆ ಲಸಿಕೆ ಲಭ್ಯವಾಗುತ್ತಿದ್ದಂತೆಯೇ ಉಚಿತವಾಗಿ ನೀಡುವ ಕುರಿತು ಚಿಂತನೆಗಳನ್ನು ನಡಸಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಸಿಎನ್.ಅಶ್ವತ್ಥ್ ನಾರಾಯಣ್ ಅವರು ಶುಕ್ರವಾರ ಹೇಳಿದ್ದಾರೆ. 
ಅಶ್ವತ್ಥ್ ನಾರಾಯಣ್
ಅಶ್ವತ್ಥ್ ನಾರಾಯಣ್

ಬೆಂಗಳೂರು: ಕೊರೋನಾ ವೈರಸ್'ಗೆ ಲಸಿಕೆ ಲಭ್ಯವಾಗುತ್ತಿದ್ದಂತೆಯೇ ಉಚಿತವಾಗಿ ನೀಡುವ ಕುರಿತು ಚಿಂತನೆಗಳನ್ನು ನಡಸಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಸಿಎನ್.ಅಶ್ವತ್ಥ್ ನಾರಾಯಣ್ ಅವರು ಶುಕ್ರವಾರ ಹೇಳಿದ್ದಾರೆ. 

ಲಸಿಕೆ ಲಭ್ಯವಾಗುತ್ತಿದ್ದಂತೆಯೇ ಸರ್ಕಾರ ಉಚಿತವಾಗಿ ಲಸಿಕೆ ನೀಡುವ ಕುರಿತು ಚಿಂತನೆಗಳನ್ನು ನಡೆಸಲಿದೆ. ಇಲ್ಲಿಯವರೆಗೆ ಸರ್ಕಾರವು ಸಾರ್ವತ್ರಿಕವಾಗಿ ಲಸಿಕೆ ನೀಡುತ್ತಲಿದೆ, ಇದು ಹೀಗೆಯೇ ಮುಂದುವರೆಯಲಿದೆ. ಉಚಿತವಾಗಿ ಲಸಿಕೆ ನೀಡುವ ಕುರಿತು ಮುಖ್ಯಮಂತ್ರಿ ನಿರ್ಧರಿಸುತ್ತಾರೆ ಎಂದು ಹೇಳಿದ್ದಾರೆ. 

ಸಾಂಕ್ರಾಮಿಕ ರೋಗ ಆರಂಭವಾದಾಗ ಸರ್ಕಾರಗಳು ಸಮಾಜದ ರಕ್ಷಣೆಗೆ ಮುಂದೆ ಬರಬೇಕಿದ್ದು, ಜನರ ಅಗತ್ಯತೆಗಳನ್ನು ಪೂರೈಸಬೇಕಿದೆ ಎಂದು ತಿಳಿಸಿದ್ದಾರೆ. 

ಬಿಹಾರ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಬಿಜೆಪಿ ಪಕ್ಷ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಪ್ರಣಾಳಿಕೆಯಲ್ಲಿ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದ್ದೇ ಆದರೆ, ಕೊರೋನಾಗೆ ಲಸಿಕೆ ಲಭ್ಯವಾಗುತ್ತಿದ್ದಂತೆಯೇ ಉಚಿತವಾಗಿ ನೀಡಲಾಗುತ್ತದೆ ಎಂದು ತಿಳಿಸಿತ್ತು. ಬಿಜೆಪಿಯ ಈ ನಿರ್ಧಾರದ ಕುರಿತು ಇದೀಗ ರಾಜ್ಯ ರಾಜಕೀಯದಲ್ಲಿ ಕೆಸರೆರಚಾಟ ಆರಂಭವಾಗಿದೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಈ ಬಗ್ಗೆ ಟ್ವೀಟ್ ಮಾಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಪ್ರಾಣ ರಕ್ಷಕ ಕೊರೊನಾ ಲಸಿಕೆಯನ್ನು ಬಿಹಾರ ರಾಜ್ಯಕ್ಕೆ ಉಚಿತವಾಗಿ ನೀಡುವ ಭರವಸೆ ನೀಡಿರುವ ನಮ್ಮ ರಾಜ್ಯದ ರಾಜ್ಯಸಭಾ ಸದಸ್ಯೆ ಮತ್ತು ಕೇಂದ್ರ ಹಣಕಾಸು ಸಚಿವೆ  ಅವರ ಔದಾರ್ಯದ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸುವುರಾ ಅವರೇ?...ಕರ್ನಾಟಕದಲ್ಲಿ ಕೊರೊನಾ ವೈರಸ್‌ ಭೀತಿಗೊಳಗಾಗಿರುವ ಜನರಿಗೆ ಲಸಿಕೆಯನ್ನು ಉಚಿತವಾಗಿ ಕೊಡಿಸುವ 'ಧಮ್' ಇದೆಯೇ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಅವರಿಗೆ ಪ್ರಶ್ನೆ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com