ರಾಜ್ಯೋತ್ಸವ ಪ್ರಶಸ್ತಿ ತಿರಸ್ಕರಿಸಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ!

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿರುವ ಹಿರಿಯ ಪತ್ರಕರ್ತ ಮಹಾದೇವ್ ಪ್ರಕಾಶ್ ಅವರು ರಾಜ್ಯೋತ್ಸವ ಪ್ರಶಸ್ತಿಯನ್ನು ತಿರಸ್ಕರಿಸಿದ್ದಾರೆ. 
ಮಹಾದೇವ್ ಪ್ರಕಾಶ್
ಮಹಾದೇವ್ ಪ್ರಕಾಶ್

ಬೆಂಗಳೂರು: ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿರುವ ಹಿರಿಯ ಪತ್ರಕರ್ತ ಮಹಾದೇವ್ ಪ್ರಕಾಶ್ ಅವರು ರಾಜ್ಯೋತ್ಸವ ಪ್ರಶಸ್ತಿಯನ್ನು ತಿರಸ್ಕರಿಸಿದ್ದಾರೆ. 

ಕಳೆದ 46 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸಿದ್ದೇನೆ. ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಮುಖ್ಯಮಂತ್ರಿಗಳು ನನನ್ನು ಹೆಸರನ್ನು ಪರಿಗಣಿಸಿದ್ದಾರೆಂದು ತಿಳಿದುಬಂದಿದೆ. ಆದರೆ, ನಾನು ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಮಾಧ್ಯಮ ಸಲಹೆಗಾರ ಆಗಿರುವುದರಿಂದ ಈ ಪ್ರಶಸ್ತಿ ಸ್ವೀಕರಿಸುವುದು ನೈತಿಕವಾಗಿ ಸರಿಯಲ್ಲ ಎಂಬುದು ನನ್ನ ಭಾವನೆ ಎಂದು ಪ್ರಕಾಶ್ ಅವರು ಹೇಳಿದ್ದಾರೆ. 

ಪ್ರಶಸ್ತಿಗಾಗಿ ನಾನು ಎಂದಿಗೂ ಲಾಬಿ ಮಾಡಿಲ್ಲ. ಈ ಬಾರಿ ಅಧಿಕಾರದ ಬಲದಿಂದ ಪ್ರಶಸ್ತಿ ಪಡೆದೆ ಎನ್ನುವ ಅಭಿಪ್ರಾಯ ಸಾರ್ವಜನಿಕವಾಗಿ ಮೂಡಬಾರದು. ನಮ್ಮ ನಡೆ ನುಡಿ ಇತರರಿಗೆ ಮಾದರಿಯಾಗಬೇಕೇ ಹೊರತು ಮಾರಕವಾಗಬಾರದು ಎನ್ನುವ ದೃಷ್ಟಿಯಿಂದ ಪ್ರಶಸ್ತಿ ನಿರಾಕರಿಸುವ ನಿರ್ಧಾರ ಮಾಡಿದ್ದೇನೆಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com