ಸುರೇಂದ್ರ ಬಂಟ್ವಾಳ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಇಡೀ ಮಂಗಳೂರನ್ನು ಬೆಚ್ಚಿ ಬೀಳಿಸಿದ್ದ ಸುರೇಂದ್ರ ಬಂಟ್ವಾಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಭಾನುವಾರ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಗಳೂರು: ಇಡೀ ಮಂಗಳೂರನ್ನು ಬೆಚ್ಚಿ ಬೀಳಿಸಿದ್ದ ಸುರೇಂದ್ರ ಬಂಟ್ವಾಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಭಾನುವಾರ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ ಬಂಟ್ವಾಳ ಸತೀಶ ಕುಲಾಲ್ ಹಾಗೂ ಕಿನ್ನಿಗೋಳಿಯ ಗಿರೀಶ್ ಎಂಬ ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರು ಕೇರಳದಿಂದ ಬಂಟ್ವಾಳಕ್ಕೆ ಬರುತ್ತಿರುವ ಮಾಹಿತಿ ಪಡೆದ ಪೊಲೀಸರು ಮುಡಿಪು ಬಳಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಆರೋಪಿಗಳಿಬ್ಬರು ಕಾಸರಗೋಡು ಕಡೆಯಿಂದ ಬಾಡಿಗೆ ವಾಹನದಲ್ಲಿ ಬಂಟ್ವಾಳ ಕಡೆ ಶನಿವಾರ ರಾತ್ರಿ ಬರುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ಡಿವೈಎಸ್ಪಿ ವೆಲೆಂಟೈನ್ ಡಿಸೋಜಾ ಮತ್ತು ಪೊಲೀಸರ ತಂಡ ಕಾರನ್ನು ತಡೆದು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಒಳಪಡಿಸಿದ್ದಾರೆ.

ಮೂರು ದಿನಗಳ ಹಿಂದೆ ಬಂಟ್ವಾಳದ ಅಪಾರ್ಟಮೆಂಟ್‌ನಲ್ಲಿ ಸುರೇಂದ್ರ ಬಂಟ್ವಾಳ ಕೊಲೆಯಾಗಿತ್ತು. ನಂತರ ಸುರೇಂದ್ರ ಬಂಟ್ವಾಳನ ಆಪ್ತ ಎನ್ನಲಾದ ಸತೀಶ್ ಎಂಬಾತ ಅಡಿಯೊ ಕಳುಹಿಸಿದ್ದು, ಸುರೇಂದ್ರ ಬಂಟ್ವಾಳ ಕೊಲೆ ಮಾಡಿರುವುದು ನಾನೇ. ಇದು ಉಡುಪಿಯ ಕಿಶನ್ ಹೆಗ್ಡೆ ಕೊಲೆಗೆ ಪ್ರತೀಕಾರ ಎಂದು  ತಿಳಿಸಿದ್ದ. ಆದಾದ ನಾಲ್ಕು ದಿನದ ಬಳಿಕ ಕೊಲೆ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com