ಎಸ್'ಟಿಗೆ ಕುರುಬ ಸೇರ್ಪೆಡೆಗಾಗಿ ಜನವರಿ 15ರಿಂದ ಪಾದಯಾತ್ರೆ

ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವ ವಿಚಾರದಲ್ಲಿ ಸರ್ಕಾರದ ಗಮನ ಸೆಳೆಯಲು ಜನವರಿ 15 ರಿಂದ ಪಾದಯಾತ್ರೆ ನಡೆಸಲು ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ನಿರ್ಧರಿಸಿದ್ದಾರೆ. 
ಈಶ್ವರಪ್ಪ
ಈಶ್ವರಪ್ಪ

ದಾವಣಗೆರೆ: ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವ ವಿಚಾರದಲ್ಲಿ ಸರ್ಕಾರದ ಗಮನ ಸೆಳೆಯಲು ಜನವರಿ 15 ರಿಂದ ಪಾದಯಾತ್ರೆ ನಡೆಸಲು ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ನಿರ್ಧರಿಸಿದ್ದಾರೆ. 

ಕುರುಬ ಸಮಾಜಕ್ಕೆ ಎಸ್ಟಿ ಮೀಸಲಾತಿಗಾಗಿ ಕಾಗಿನೆಲೆಯಿಂದ ಜ.15ಕ್ಕೆ ತಮ್ಮ ನೇತೃತ್ವದಲ್ಲಿ ಪಾದಯಾತ್ರೆ ಆರಂಭವಾಗಲಿದೆ. ನಿತ್ಯವೂ 20 ಕಿಮೀನಷ್ಟು ಪಾದಯಾತ್ರೆಯಲ್ಲಿ ಸಾಗುವ ಮೂಲಕ ಬೆಂಗಳೂರು ತಲುಪಲಾಗುವುದು. ಪ್ರತಿ ಜಿಲ್ಲೆ, ತಾಲೂಕು, ಗ್ರಾಮಗಳಲ್ಲೂ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಪ್ರೇರಣೆಯಿಂದ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆಂದು ಹೇಳಿದ್ದಾರೆ. 

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮಾತನಾಡಿ, ಕುರುಬ ಸಮಾಜಕ್ಕೆ ಎಸ್ಟಿ ಮೀಸಲಾತಿಗೆ ಜ.15ರಿಂದ ಆಗ್ರಹಿಸಿ ಕಾಗಿನೆಲೆ ನಿರಂಜನಾನಂದ ಪುರಿ ಸ್ವಾಮಿ ಸಾರಥ್ಯದಲ್ಲಿ ಕಾಗಿನೆಲೆಯಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಸಲು ನಿರ್ಧರಿಸಲಾಗಿದೆ. ಪಾದಯಾತ್ರೆ ಫೆ.7 ಬೆಂಗಳೂರಿನಲ್ಲಿ ಸಮಾಪ್ತಿಗೊಳ್ಳಲಿದೆ. ಅಲ್ಲದೇ, ಅಂದೇ ಬೃಹತ್ ಕುರುಬ ಸಮಾವೇಶವನ್ನು ರಾಜಧಾನಿಯಲ್ಲಿ ನಡೆಸಲಾಗುವುದು ಎಂದು ತಿಳಿಸಿದರು. 

ನವೆಂಬರ್ 8ರಂದು ಹಾವೇರಿ ಜಿಲ್ಲೆ ಕಾಗಿನೆಲೆ ಕ್ಷೇತ್ರದಲ್ಲಿ ಮಹೀಳಾ ಸಮಾವೇಶ ಮತ್ತು ರಾಜ್ಯದ 4 ಭಾಗಗಳಲ್ಲಿ ಸಮಾವೇಶ ನಡೆಸಲು ನಿರ್ಧರಿಸಲಾಗಿದ್ದು, ಫೆಬ್ರವರಿ 7 ರಂದು ಬೆಂಗಳೂರಿನಲ್ಲಿ ಮೆಗಾ ರ್ಯಾಲಿ ನಡೆಯಲಿದೆ ಎಂದು ತಿಳಿದುಬಂದಿದೆ. 

ಎಸ್ಟಿ ಮೀಸಲಾತಿ ಬಗ್ಗೆ ಕೇವಲ ಪುರುಷರಿಗಷ್ಟೇ ಮಾಹಿತಿ ಇರುವುದಲ್ಲ. ಸಮಾಜದ ತಾಯಂದಿರಿಗೂ ಇದರ ಅರಿವು ಮೂಡಿಸುವ ಉದ್ದೇಶದಿಂದ ಕಾಗಿನೆಲೆಯಲ್ಲಿ ಮಹಿಳಾ ಸಮಾವೇಶ ನಡೆಸಲಾಗುತ್ತಿದೆ. ವಾಲ್ಮೀಕಿ ಸಮುದಾಯ ನಮ್ಮ ಸಹೋದರ ಸಮಾಜವಾಗಿದೆ. ನಾಯಕ ಸಮಾಜಕ್ಕೆ ಅನ್ಯಾಯವಾಗುವುದಕ್ಕೆ ಬಿಡುವುದಿಲ್ಲ. ವಾಲ್ಮೀಕಿ ಸಮುದಾಯದ ಮೀಸಲಾತಿಗೂ ಧಕ್ಕೆಯಾಗುವುದಿಲ್ಲ ಎಂದು ಇದೇ ವೇಳೆ ಸ್ವಾಮೀಜಿಗಳು ಸ್ಪಷ್ಟಪಡಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com