ದೇಶದಲ್ಲಿ ಅಪಘಾತದಿಂದ ಅತಿ ಹೆಚ್ಚು ಸಾವು: ಸಿಲಿಕಾನ್ ಸಿಟಿ ಬೆಂಗಳೂರಿಗೆ 3ನೇ ಸ್ಥಾನ!

ದೇಶದಲ್ಲಿ ಅಪಘಾತದಿಂದ ಅತೀ ಹೆಚ್ಚು ಸಾವು ಸಂಭವಿಸಿದ ನಗರಗಳ ಪೈಕಿ ಸಿಲಿಕಾನ್ ಸಿಟಿ ಬೆಂಗಳೂರು 3ನೇ ಸ್ಥಾನದಲ್ಲಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ದೇಶದಲ್ಲಿ ಅಪಘಾತದಿಂದ ಅತೀ ಹೆಚ್ಚು ಸಾವು ಸಂಭವಿಸಿದ ನಗರಗಳ ಪೈಕಿ ಸಿಲಿಕಾನ್ ಸಿಟಿ ಬೆಂಗಳೂರು 3ನೇ ಸ್ಥಾನದಲ್ಲಿದೆ.

ಈ ಬಗ್ಗೆ ಕೇಂದ್ರ ನ್ಯಾಷನಲ್ ಕ್ರೈಮ್ ರೆಕಾರ್ಡ್ ಬ್ಯೂರೋ (NCRB) ವರದಿ ನೀಡಿದ್ದು, ಅಪಘಾತದಿಂದ ಸಾವನ್ನಪ್ಪಿದವರ ಹೆಚ್ಚು ಸಂಖ್ಯೆಗಳನ್ನು ಹೊಂದಿರುವ ನಗರಗಳ ಪೈಕಿ ಬೆಂಗಳೂರು 3ನೇ ಸ್ಥಾನ ಪಡೆದುಕೊಂಡಿದೆ ಎಂದು ಹೇಳಲಾಗಿದೆ.

ಭಾರತದಲ್ಲಿ ಅಪಘಾತದಲ್ಲಿ ಹೆಚ್ಚು ಸಾವನ್ನಪ್ಪಿರುವ ನಗರಗಳಲ್ಲಿ ಬೆಂಗಳೂರು 3ನೇ ಸ್ಥಾನ ಪಡೆದುಕೊಂಡಿದ್ದು, 2018 ರಲ್ಲಿ 4,611 ಅಪಘಾತ ಪ್ರಕರಣಗಳು ದಾಖಲಾಗಿದ್ದರೆ, 2019 ರಲ್ಲಿ 4,684 ಪ್ರಕರಣಗಳು ದಾಖಲಾಗಿವೆ. 2018 ರಲ್ಲಿ ಅಪಘಾತಗಳಿಂದ 686 ಸಾವಾಗಿದ್ದು, 2019 ರಲ್ಲಿ 768 ಮಂದಿ ಅಪಘಾತದಿಂದ  ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಇನ್ನು ಚೆನ್ನೈನಲ್ಲಿ 2018 ರಲ್ಲಿ 7,580 ಅಪಘಾತ ಪ್ರಕರಣಗಳು ದಾಖಲಾಗಿದ್ದು, 2019 ರಲ್ಲಿ 6,871 ಪ್ರಕರಣಗಳು ದಾಖಲಾಗಿವೆ. ದೆಹಲಿಯಲ್ಲಿ 2018 ರಲ್ಲಿ 6,515 ಅಪಘಾತ ಪ್ರಕರಣಗಳು ದಾಖಲಾಗಿದ್ದು, 2019 ರಲ್ಲಿ 5,610 ಪ್ರಕರಣಗಳು ದಾಖಲಾಗಿವೆ.

ಇನ್ನು ರಾಜ್ಯಗಳ ಪಟ್ಟಿಯಲ್ಲಿ ಅಪಘಾತದಿಂದ ಅತೀ ಹೆಚ್ಚು ಸಾವು ಸಂಭಸಿರುವ ರಾಜ್ಯಗಳ ಪಟ್ಟಿಯಲ್ಲಿ ಮಹಾರಾಷ್ಟ್ರ ಆಗ್ರ ಸ್ಥಾನದಲ್ಲಿದ್ದು, ಇಲ್ಲಿ 47,295ಅಪಘಾತ ಪ್ರಕರಣಗಳ ಪೈಕಿ 15,358 ಸಾವು ಸಂಭವಿಸಿದೆ ಎಂದು ಹೇಳಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com