ರಾಜ್ಯದಲ್ಲಿಂದು 3,146 ಹೊಸ ಕೊರೋನಾ ಪತ್ತೆ, 55 ಸಾವು: 11 ಸಾವಿರಕ್ಕೇರಿದ ಸಾವಿನ ಸಂಖ್ಯೆ!

ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಕಡಿಮೆಯಾಗುತ್ತಿದ್ದು, ಇಂದು 3,146 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 8,12,784ಕ್ಕೆ ಏರಿಕೆಯಾಗಿದೆ.

Published: 28th October 2020 09:00 PM  |   Last Updated: 28th October 2020 09:00 PM   |  A+A-


Corona-virus

ಸಂಗ್ರಹ ಚಿತ್ರ

Posted By : Vishwanath S
Source : Online Desk

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಕಡಿಮೆಯಾಗುತ್ತಿದ್ದು, ಇಂದು 3,146 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 8,12,784ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ 55 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 11,046ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 1,612 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 3,30,862ಕ್ಕೆಕ್ಕೆ ಏರಿಕೆಯಾಗಿದೆ. ನಗರದಲ್ಲಿ ಇಂದು 23 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.

ಇಂದು 7,384 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 7,33,558ಕ್ಕೆ ಏರಿಕೆಯಾಗಿದೆ. 68,161 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Stay up to date on all the latest ರಾಜ್ಯ news
Poll
RBI

ಕಾರ್ಪೊರೇಟ್‌ ಕಂಪನಿಗಳಿಗೆ ಬ್ಯಾಂಕ್‌ ಆರಂಭಿಸಲು ಅನುಮತಿಸುವಂತೆ ಕೇಂದ್ರ ಸರ್ಕಾರಕ್ಕೆ ಆರ್ ಬಿಐ ನೀಡಿರುವ ಸಲಹೆಯನ್ನು ಸ್ವಾಗತಿಸುತ್ತೀರಾ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp