ರಾಜ್ಯದಲ್ಲಿ ಮೀನುಗಾರಿಕೆ ವಿಶ್ವವಿದ್ಯಾಲಯ ಸ್ಥಾಪಿಸಲು ಪ್ರಸ್ತಾವ ಸಲ್ಲಿಕೆ

ರಾಜ್ಯದ ಮೀನುಗಾರಿಕೆ ಕಾಲೇಜಿಗೆ 51 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅದನ್ನು ಕರ್ನಾಟಕ ಮೀನುಗಾರಿಕೆ ವಿಶ್ವವಿದ್ಯಾನಿಲಯವನ್ನಾಗಿ ಮೇಲ್ದರ್ಜೆಗೇರಿಸಲು ಕಾಲೇಜು ಆಡಳಿತ ಪ್ರಸ್ತಾವನೆ ಸಲ್ಲಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಗಳೂರು: ರಾಜ್ಯದ ಮೀನುಗಾರಿಕೆ ಕಾಲೇಜಿಗೆ 51 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅದನ್ನು ಕರ್ನಾಟಕ ಮೀನುಗಾರಿಕೆ ವಿಶ್ವವಿದ್ಯಾನಿಲಯವನ್ನಾಗಿ ಮೇಲ್ದರ್ಜೆಗೇರಿಸಲು ಕಾಲೇಜು ಆಡಳಿತ ಪ್ರಸ್ತಾವನೆ ಸಲ್ಲಿಸಿದೆ.

ಮೀನುಗಾರಿಕಾ ಸಚಿವ ಕೋಟಾ ಶ್ರೀನಿವಾಸ್‌ ಪೂಜಾರಿ ಅವರೊಂದಿಗೆ ಮಂಗಳವಾರ ಸಂಜೆ ನಡೆದ ಪರಿಶೀಲನಾ ಸಭೆಯಲ್ಲಿ ಕಾಲೇಜಿನ ಡೀನ್‌ ಡಾ.ಸಂಥಿಲ್‌ ವೆಲ್‌ ಪ್ರಸ್ತಾವನೆ ಸಲ್ಲಿಸಿದರು.

ಸಚಿವರ ಸಲಹೆ ಮೇರೆಗೆ ಸಸರ್ಕಾರಕ್ಕೆ ವಿಶ್ವವಿದ್ಯಾಲಯ ಸ್ಥಾಪಿಸುವ ವಿಸ್ತೃತ ಪ್ರಸ್ತಾವನೆಯನ್ನು ಕಳುಸಹಿಲಾಗಿದೆ. ವಿಶ್ವವಿದ್ಯಾಲಯ ಸ್ಥಾಪಿಸುವುದರಿಂದ ಹೆಚ್ಚು ಐಸಿಎಆರ್‌ ಗುರುತಿಸಲ್ಪಟ್ಟ ಕಾಲೇಜುಗಳನ್ನು ಸ್ಥಾಪಿಸಬಹುದು ಎಂದರು. 
ಇದರಿಂದ 200ಕ್ಕೂ ಉದ್ಯೋಗಗಳು ಸೃಷ್ಟಿಯಾಗಲಿದೆ ಎಂದು ಸಂಥಿಲ್‌ ವೆಲ್‌ ವಿಶ್ವಾಸ ವ್ಯಕ್ತಪಡಿಸಿದರು.

ಪ್ರಸ್ತುತ ಮೀನುಗಾರಿಕೆ ಕಾಲೇಜು ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನಾಗಾರಿಕೆ ವಿಜ್ಞಾನದ ವಿಶ್ವವಿದ್ಯಾಲಯದಡಿ ಬರುತ್ತದೆ. ಸದ್ಯ ಕೇರಳ, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಪ್ರತ್ಯೇಕ ಮೀನುಗಾರಿಕಾ ವಿಶ್ವವಿದ್ಯಾನಿಲಯಗಳಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com