ಮೇಲ್ಮನೆ: ಇಂದು 4 ಕ್ಷೇತ್ರಗಳಿಗೆ ಮತದಾನ, ನವಂಬರ್ 2 ಕ್ಕೆ ಫಲಿತಾಂಶ

ವಿಧಾನಪರಿಷತ್'ನ ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗಳಿಗೆ ಅ.28ರ ಬುಧವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. 
ಮತದಾನ ನಡೆಯುವ ಸ್ಥಳದಲ್ಲಿ ಸ್ಯಾನಿಟೈಸರ್ ಅಳವಡಿಸುತ್ತಿರುವ ಬಿಬಿಎಂಬಿ ಸಿಬ್ಬಂದಿ
ಮತದಾನ ನಡೆಯುವ ಸ್ಥಳದಲ್ಲಿ ಸ್ಯಾನಿಟೈಸರ್ ಅಳವಡಿಸುತ್ತಿರುವ ಬಿಬಿಎಂಬಿ ಸಿಬ್ಬಂದಿ

ಬೆಂಗಳೂರು: ವಿಧಾನಪರಿಷತ್'ನ ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗಳಿಗೆ ಅ.28ರ ಬುಧವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. 

4 ಕ್ಷೇತ್ರಗಳಲ್ಲಿ ಒಟ್ಟಾರೆ 549 ಮತಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ. ಚುನಾವಣಾ ಕಣದಲ್ಲಿ ಅಂತಿಮವಾಗಿ 40 ಅಭ್ಯರ್ಥಿಗಲು ಸೆಣಸಲಿದ್ದಾರೆ. ವಿಧಾನಪರಿಷತ್'ನ ನಾಲ್ಕು ಕ್ಷೇತ್ರಗಳಿಗೆ ನ.2ರಂದು ಮತ ಎಣಿಕೆ ನ ಡೆಯಲಿದೆ. 

ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ, ಧಾರವಾಡ, ಹಾವೇರಿ, ಗದಕ, ಉತ್ತರಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾಕಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರದಲ್ಲಿ ಮತದಾನ  ನಡೆಯಲಿದೆ. 

ನಾಲ್ಕು ಕ್ಷೇತ್ರಗಳಲ್ಲಿ ಒಟ್ಟಾರೆ 549 ಮತಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ. ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ 146 ಮತ ಕೇಂದ್ರಗಳು, ಆಗ್ನೇಯ ಪದವೀದರ ಕ್ಷೇತ್ರದಲ್ಲಿ 187 ಮತಕೇಂದ್ರಗಳು, ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ 69 ಮತಕೇಂದ್ರಗಳು ಮತ್ತು ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ 147 ಮತಕೇಂದ್ರಗಳನ್ನು ಸ್ಥಾಪಿಸಲಾಗಿದೆ. 

ಚುನಾವಣಾ ಕಣದಲ್ಲಿ ಅಂತಿಮವಾಗಿ 40 ಅಭ್ಯರ್ಥಿಗಳ ಸೆಣಸಲಿದ್ದಾರೆ. ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ 9 ಅಭ್ಯರ್ಥಿಗಳು, ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ 5 ಅಭ್ಯರ್ಥಿಗಳು, ಆಗ್ನೇಯ ಪದವೀಧರ ಕ್ಷೇತ್ರದಲ್ಲಿ 15 ಅಭ್ಯರ್ಥಿಗಳು ಮತ್ತು ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ 11 ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ. ನಾಲ್ಕು ಕ್ಷೇತ್ರದಲ್ಲಿ ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷ ಕಾಂಗ್ರೆಸ್ ಮತ್ತು ಜೆಡಿಎಸ್'ನ ತಲಾ 4 ಅಭ್ಯರ್ಥಿಗಳು, ನೋಂದಾಯಿತ ಪಕ್ಷದಿಂದ 6 ಅಭ್ಯರ್ಥಿಗಳು ಮತ್ತು 22 ಪಕ್ಷೇತರ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. 

ವಿಧಾನಪರಿಷತ್'ನ ನಾಲ್ಕು ಕ್ಷೇತ್ರಗಳಿಗೆ ನ.2ರಂದು ಮತ ಎಣಿಕೆ ನಡೆಯಲಿದೆ. ಪದವೀಧರ ಕ್ಷೇತ್ರದ ಮತ ಎಣಿಕೆಯು ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ನಡೆಯಲಿದೆ. ಒಂದು ಹಾಲ್'ನಲ್ಲಿ ಏಳು ಟೇಬಲ್ ವ್ಯವಸ್ಥೆ ಮಾಡಲಾಗಿದ್ದು, ಈಶಾನ್ಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆಯು ಗುಲ್ಬರ್ಗ ವಿಶ್ವವಿದ್ಯಾಲಯದ ಗಣಿತ ವಿಭಾಗದಲ್ಲಿ ನಡೆಯಲಿದೆ. ಒಂದು ಹಾಲ್'ನಲ್ಲಿ ಏಳು ಟೇಬಲ್ ವ್ಯವಸ್ಥೆ ಮಾಡಲಾಗಿದೆ. ಆಗ್ನೇಯ ಪದವೀಧರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕರ ಮತ ಕ್ಷೇತ್ರದ ಮತ ಎಣಿಕೆಯು ಸರ್ಕಾರಿ ಕಲಾ ಕಾಲೇಜಿನಲ್ಲಿ ನಡೆಯಲಿದ್ದು, ಪ್ರತ್ಯೇಕವಾಗಿ ಎರಡು ಹಾಲ್ ನಲ್ಲಿ ತಲಾ 14  ಟೇಬಲ್ ಗಳ ವ್ಯವಸ್ಥೆ ಮಾಡಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com