ನವೆಂಬರ್ 1 ರಿಂದ ರಾಜ್ಯದಲ್ಲಿ ಶುರುವಾಗಲಿದೆ ಹಿಂಗಾರು ಮಳೆ ಅಬ್ಬರ...!!

ದೇಶದಲ್ಲಿ ನೈರುತ್ಯ ಮುಂಗಾರು ಮಳೆಯ ಅವಧಿ ಅರ್ಭಟ, ಮುಗಿದರೂ ನವೆಂಬರ್ 1 ರಿಂದ ರಾಜ್ಯದ ಹಲವು ಭಾಗಗಳಲ್ಲಿ ಈಶಾನ್ಯ ಮಾರುತಗಳ ಕಾರಣ ಹಿಂಗಾರಿನಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ದೇಶದಲ್ಲಿ ನೈರುತ್ಯ ಮುಂಗಾರು ಮಳೆಯ ಅವಧಿ ಅರ್ಭಟ, ಮುಗಿದರೂ ನವೆಂಬರ್ 1 ರಿಂದ ರಾಜ್ಯದ ಹಲವು ಭಾಗಗಳಲ್ಲಿ ಈಶಾನ್ಯ ಮಾರುತಗಳ ಕಾರಣ ಹಿಂಗಾರಿನಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. 
 
ಈಗಾಗಲೆ ಭಾರೀ ಮಳೆಯಿಂದಾಗಿ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ. ಈ ಬಾರಿಯ ಹಿಂಗಾರು ಮಳೆ ತಡವಾಗಿ ಅಂದರೆ ಅಕ್ಟೋಬರ್ 28 ರಿಂದ ಆರಂಭವಾಗಿದೆ. ಮುಂಗಾರಿನಲ್ಲಿ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಇದೀಗ ದಕ್ಷಿಣ ಒಳನಾಡಿನ ವ್ಯಾಪ್ತಿಯಲ್ಲೇ ಹೆಚ್ಚು ಪ್ರಭಾವ ಬೀರುವ ಹಿಂಗಾರು ಮಳೆ ನಿನ್ನೆಯಿಂದ ಆರಂಭವಾಗಿದೆ. 

ನವೆಂಬರ್ 1 ರ ಹೊತ್ತಿಗೆ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುಉವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಿರಲಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com