ರಾಜರಾಜೇಶ್ವರಿ ನಗರ ಉಪ ಚುನಾವಣೆ: ನ.1ರಿಂದ ನ.3ರವರೆಗೆ ಮದ್ಯ ಮಾರಾಟ ನಿಷೇಧ

ರಾಜರಾಜೇಶ್ವರಿ ನಗರ ಉಪಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮವಾಗಿ ವಿಧಾನಸಭಾ ಕ್ಷೇತ್ರದಲ್ಲಿ ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜರಾಜೇಶ್ವರಿ ನಗರ ಉಪಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮವಾಗಿ ವಿಧಾನಸಭಾ ಕ್ಷೇತ್ರದಲ್ಲಿ ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ನ. 3ರಂದು ಮತದಾತ ನಡೆಯಲಿದ್ದು ಮುಂಜಾಗ್ರತ ಕ್ರಮವಾಗಿ ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದಲ್ಲಿ ನವೆಂಬರ್ 1ರ ಸಂಜೆ 5 ಗಂಟೆಯಿಂದ ನ.3ರ ಮಧ್ಯಾರಾತ್ರಿ 12 ಗಂಟೆವರೆಗೆ ಮದ್ಯ ಮಾರಾಟ ನಿಷೇಧಗೊಳಿಸಲಾಗಿದ್ದು ಇದೇ ವೇಳೆ ಮತ ಎಣಿಕೆ ನಡೆಯಲಿರುವ ನವೆಂಬರ್ 10ರಂದು ಸಹ ನಿಷೇಧ ಜಾರಿಗೊಳಿಸಲಾಗಿದೆ.

ಮುನಿರತ್ನ ರಾಜಿನಾಮೆಯಿಂದಾಗಿ ರಾಜರಾಜೇಶ್ವರಿ ನಗರದಲ್ಲಿ ಉಪ ಚುನಾವಣೆ ನಡೆಯುತ್ತಿದೆ. ಈ ಬಾರಿ ಕಾಂಗ್ರೆಸ್ ನಿಂದ ಕುಸುಮಾ ಸ್ಪರ್ಧಿಸುತ್ತಿದ್ದರೆ ಬಿಜೆಪಿಯಿಂದ ಮುನಿರತ್ನ ಇನ್ನು ಜೆಡಿಎಸ್ ನಿಂದ ಕೃಷ್ಣಮೂರ್ತಿ ಸ್ಪರ್ಧಿಸುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com