ರಾಜ್ಯದಲ್ಲಿಂದು 3,589 ಮಂದಿಗೆ ಕೊರೋನಾ ಪಾಸಿಟಿವ್, 49 ಸಾವು, 8,521 ಮಂದಿ ಡಿಸ್ಚಾರ್ಜ್!

ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಕಡಿಮೆಯಾಗುತ್ತಿದ್ದು, ಇಂದು 3,589 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 8,20,398ಕ್ಕೆ ಏರಿಕೆಯಾಗಿದೆ.
ಕೊರೋನಾ ವೈರಸ್ ತಪಾಸಣೆ ಕಿಟ್ ನ್ನು ಸಾಗಿಸುತ್ತಿರುವ ಆರೋಗ್ಯ ಕಾರ್ಯಕರ್ತೆ
ಕೊರೋನಾ ವೈರಸ್ ತಪಾಸಣೆ ಕಿಟ್ ನ್ನು ಸಾಗಿಸುತ್ತಿರುವ ಆರೋಗ್ಯ ಕಾರ್ಯಕರ್ತೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಕಡಿಮೆಯಾಗುತ್ತಿದ್ದು, ಇಂದು 3,589 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 8,20,398ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ 49 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 11,140ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 1,811 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 3,34,848ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಇಂದು 27 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.

ಇಂದು 8,521 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 7,49,740ಕ್ಕೆ ಏರಿಕೆಯಾಗಿದೆ. 59,499 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com